ಬೆಂಗಳೂರು | ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ

  • 2.5 ಲಕ್ಷಕ್ಕೂ ಅಧಿಕ ಸರ್ಕಾರಿ ಉದ್ಯೋಗ ಭರ್ತಿ ಮಾಡುವಲ್ಲಿ ಸರ್ಕಾರ ವಿಫಲ
  • ಯುಪಿಎಸ್‌ಸಿ ಮಾದರಿಯಲ್ಲಿ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲು ಆಗ್ರಹ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ 2.5 ಲಕ್ಷಕ್ಕೂ ಅಧಿಕ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವಲ್ಲಿ ವಿಫಲವಾಗಿದ್ದು, ಶೀಘ್ರದಲ್ಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳ ಸಂಘದ ವತಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿ ಬೃಹತ್‌ ಪ್ರತಿಭಟನೆಗೆ ಕರೆ ನೀಡಲಾಗಿದೆ.

“ಈಗಾಗಲೇ ನಡೆದಿರುವ ಭರ್ತಿ ಪ್ರಕ್ರಿಯೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ಸರ್ಕಾರ ಇದರ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ಉದ್ಯೋಗ ವಂಚಿತರಾದ ನಾವು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ” ಎಂದು ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 19ರಂದು ಬೆಳಗ್ಗೆ 10 ಗಂಟೆಗೆ ಸಂಘದಿಂದ ಬೆಂಗಳೂರಿನ 'ಫ್ರೀಡಂ ಪಾರ್ಕ್‌'ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯದ ಯುವಜನತೆಗೆ ಸಹಸ್ರಾರು ಸಂಖ್ಯೆಯಲ್ಲಿ ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿ ಪ್ರಕಟಣೆ ಹೊರಡಿಸಿದ್ದಾರೆ. 

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿಗಳಲ್ಲಿ ಗಣಿತ ಕಲಿಕೆ ಉತ್ತೇಜಿಸಲು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

ಕೆಪಿಎಸ್‌ಸಿ, ಕೆಎಸ್‌ಪಿ, ಕೆಇಎ ಹಾಗೂ ಕೆಎಫ್‌ಡಿ ನಡೆಸುವ ಪ್ರತಿಯೊಂದು ಪರೀಕ್ಷೆಗೂ ತಾತ್ಕಾಲಿಕ ವೇಳಾಪಟ್ಟಿ  ಅಧಿಸೂಚನೆಯೊಂದಿಗೆ ಪ್ರಕಟಿಸಬೇಕು ಮತ್ತು ಯುಪಿಎಸ್‌ಸಿ ಮಾದರಿಯಲ್ಲಿ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ. 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಡೆದ ಹಗರಣದ ವಿಚಾರಣೆಯನ್ನು ಶೀಘ್ರವಾಗಿ ಮುಗಿಸಿ 545 ಮತ್ತು 402 ಪಿಎಸ್ಐ ಅಧಿಸೂಚನೆಯ ಪರೀಕ್ಷೆಯನ್ನು ಅತೀ ಶೀಘ್ರದಲ್ಲಿ ನಡೆಸಬೇಕು. ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಗೆ ಅರ್ಹತಾ ವಯೋಮಿತಿ ಹೆಚ್ಚಿಸಲು ಆಗ್ರಹಿಸಲಿದ್ದಾರೆ. ಕೆಇಎ ನಡೆಸಿದ ಕೆಪಿಟಿಸಿಎಲ್ ಪರೀಕ್ಷೆಯ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ರಾಜಸ್ಥಾನದ ಮಾದರಿಯಲ್ಲಿ ಪರೀಕ್ಷಾ ಆಕ್ರಮದಲ್ಲಿ ಭಾಗವಹಿಸಿದವರಿಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಮಸೂದೆಯನ್ನು ಜಾರಿಗೆ ತರಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180