ಮೋದಿ ಕರ್ನಾಟಕ ಭೇಟಿ| ಕಾಲೇಜುಗಳಿಗೆ ರಜೆ ಕೊಡಲು ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರೇ: ಡಿಕೆಶಿ ಪ್ರಶ್ನೆ

d k shivakumar
  • ಕರ್ನಾಟಕದ ವಿದ್ಯಾರ್ಥಿಗಳಲ್ಲಿ ಗಲಾಟೆ ಸಂಸ್ಕೃತಿ ಇಲ್ಲ: ಡಿ ಕೆ ಶಿವಕುಮಾರ್ 
  • ಪ್ರಧಾನಿಗಳು ಬರುತ್ತಾರೆ, ಹೋಗುತ್ತಾರೆ ಅವರಿಗೆ ಭದ್ರತೆ ಅಷ್ಟೇ ನೀಡಿ: ಆಗ್ರಹ

ಪ್ರಧಾನಿ ನರೇಂದ್ರ ಅವರಿಗೆ ಎಷ್ಟು ಭಯ ಇದೆ ಎಂದರೆ ಪ್ರಧಾನಮಂತ್ರಿಗಳು ಪ್ರಯಾಣ ಮಾಡುವ ದಾರಿಯಲ್ಲಿನ ಕಾಲೇಜುಗಳಿಗೆ ರಜೆ ಕೊಟ್ಟಿದ್ದಾರೆ. ಯಾಕೆ ಕೊಡಬೇಕು? ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಅವರು ಮಾತನಾಡಿ, “ವಿದ್ಯಾರ್ಥಿಗಳೇನು ಗಲಾಟೆ ಮಾಡುತ್ತಾರಾ? ಕರ್ನಾಟಕದ ವಿದ್ಯಾರ್ಥಿಗಳಲ್ಲಿ ಆ ಸಂಸ್ಕೃತಿ ಇಲ್ಲ. ಪ್ರಧಾನಿಗಳು ಬರುತ್ತಾರೆ, ಹೋಗುತ್ತಾರೆ. ಅವರಿಗೆ ಅಗತ್ಯವಿರುವ ಭದ್ರತೆ ನೀಡಿ. ಹುಡುಗರು ಅವರು ಹೋಗುವ ದಾರಿಯಲ್ಲಿ ಕೈ ಬೀಸಬೇಕಾ? ರೋಡ್ ಶೋ ಮಾಡಿಸಬೇಕಾ? ಎಂದು ಹರಿಹಾಯ್ದರು.

“ಸಚಿವರೊಬ್ಬರು ಅಗ್ನಿಪಥ್ ಯೋಜನೆ ಕುರಿತು, ಸೆಕ್ಯೂರಿಟಿ ಗಾರ್ಡ್, ಫೈರ್ ಫೋರ್ಸ್ ಎಂದು ಹೇಳುತ್ತಿದ್ದಾರೆ. ನಮ್ಮ ಹುಡುಗರು ವಿದ್ಯಾಭ್ಯಾಸ ಮಾಡುವುದು ಬೇಡವೇ? ಪದವಿ ಶಿಕ್ಷಣ ಪಡೆಯುವುದು ಬೇಡವೇ? ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ನಾವು ಹೋರಾಟ ಮಾಡುತ್ತಿದ್ದು, ಇವರು 17 ವರ್ಷಕ್ಕೆ ಯುವಕರನ್ನು ಸೇನೆಗೆ ಆಯ್ಕೆ ಮಾಡಿ ನಾಲ್ಕು ವರ್ಷಗಳ ನಂತರ ಗಾರ್ಡ್ ಕೆಲಸಕ್ಕೆ ಹಾಕುತ್ತಾರಂತೆ. ಇಷ್ಟು ವರ್ಷಗಳ ಕಾಲ ನಮ್ಮ ಯುವಕರು ತರಬೇತಿ ಪಡೆದು ಕಷ್ಟ ಕಾಲದಲ್ಲಿ ದೇಶ ರಕ್ಷಣೆ ಮಾಡಿದ್ದಾರಲ್ಲವೆ? ಅವರಿಗೆ ಈ ರೀತಿ ಅಪಮಾನ ಮಾಡಬಹುದೇ,” ಎಂದು ಪ್ರಶ್ನಿಸಿದರು.

ʼಅಗ್ನಿಪಥ್‌ʼ ಸಮರ್ಥಿಸಿಕೊಳ್ಳುತ್ತಿರುವ ಮಂತ್ರಿಗಳು ತಮ್ಮ ಮಕ್ಕಳನ್ನು ಇದಕ್ಕೆ ಸೇರಿಸುತ್ತಾರೆಯೇ? ನಿಮ್ಮ ಶಾಸಕರ ಮಕ್ಕಳನ್ನು ಕಳುಹಿಸಿ. ನಿಮ್ಮ ಮಕ್ಕಳು ಮಾತ್ರ ಡಾಕ್ಟರ್, ಇಂಜಿನಿಯರ್, ಪ್ರೊಫೆಸರ್ ಗಳಾಗ ಬೇಕು. ಬೇರೆ ಬಡವರ ಮಕ್ಕಳು ಗಾರ್ಡ್ ಕೆಲಸ ಮಾಡಬೇಕಾ? ಇದಕ್ಕೆ ನಮ್ಮ ವಿರೋಧವಿದೆ,” ಎಂದರು.

ನಮ್ಮ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ಉದ್ಯೋಗ ನೀಡಿ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದಿರಿ. ನೀವು ಆ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸಿ.

ಈಗ ನಮ್ಮ ದೇಶ ನೆರೆಯ ಯಾವ ದೇಶದ ಜತೆ ಉತ್ತಮ ಬಾಂಧವ್ಯ ಉಳಿಸಿಕೊಂಡಿದೆ. ನೇಪಾಳ, ಚೀನಾ, ಶ್ರೀಲಂಕಾ, ಬರ್ಮಾ ಯಾವ ದೇಶ ನಮ್ಮ ಜತೆ ಇದೆ? ವಿದೇಶಾಂಗ ನೀತಿ ಬಗ್ಗೆ ಕೊಂಚವೂ ಗಮನಹರಿಸದಿದ್ದರೆ , ಇದಕ್ಕೆಲ್ಲ ಯಾರು ಹೊಣೆ?” ಎಂದಿದ್ದಾರೆ.

ಹಿಂದೂ ವಿರೋಧಿ ಎಂಬ ಬಿಜೆಪಿ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, 'ನಾನು ನನ್ನ ಕ್ಷೇತ್ರದಲ್ಲಿ 350 ರಿಂದ 400 ದೇವಾಲಯ ಜೀರ್ಣೋದ್ಧಾರ ಮಾಡಿಸಿದ್ದೇನೆ. ನಾನು ಒಬ್ಬ ಹಿಂದೂ. ನಾವು ಎಲ್ಲರಿಗೂ ಗೌರವ ನೀಡುತ್ತೇವೆ. ನಾವು ಯಾರಿಗಾದರೂ ಅಧಿಕಾರ ನೀಡುತ್ತೇವೆ ಅವರಿಗೇನು? ನಮ್ಮ ಯುವಕರ ಸಂಘಟನೆ ಬಗ್ಗೆ ಇವರಿಗೆ ಭಯ ಇದೇ ಎಂಬುದು ಸ್ಪಷ್ಟವಾಗಿದೆ' ಎಂದು ತಿರುಗೇಟು ಕೊಟ್ಟರು.

ಈ ಸುದ್ದಿ ಓದಿದ್ದೀರಾ? ಹಾಲಿ ಪ್ರಧಾನಿ ಮೋದಿಯನ್ನು 'ಮಾಜಿ' ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ಬಿಜೆಪಿ ಸರ್ಕಾರದಿಂದ ಪರಿಷ್ಕರಣೆಯಾಗಿರುವ ಪಠ್ಯದಲ್ಲಿ ಬಾಲಗಂಗಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಕುವೆಂಪು, ನಾರಾಯಣಗುರುಗಳ ಇತಿಹಾಸ ಸೇರಿದಂತೆ ಅನೇಕ ಗಣ್ಯರ ವಿಚಾರ ತಿರುಚಿ ಅಪಮಾನ ಮಾಡಲಾಗಿದೆ,”ಎಂದು ಆರೋಪಿಸಿದರು.

“ವಿವಿಧ ಕನ್ನಡ ಸಂಘಟನೆಗಳು ನಿನ್ನೆ ಪ್ರತಿಭಟನೆ ಹಮ್ಮಿಕೊಂಡಿದ್ದವು. ಅವರಿಗೆ ಯಾವುದೇ ರಾಜಕೀಯದ ಅಗತ್ಯವಿಲ್ಲ. ಅದೇ ರೀತಿ ಸ್ವಾಮೀಜಿಗಳು ಈ ವಿಚಾರವಾಗಿ ಧ್ವನಿ ಎತ್ತಬೇಕು ಸ್ವಾಮೀಜಿಗಳಲ್ಲಿ ನಮ್ರತೆಯಿಂದ ಮನವಿ ಮಾಡಿಕೊಳ್ಳುತ್ತೇನೆ' ಎಂದರು.

ನಿಮಗೆ ಏನು ಅನ್ನಿಸ್ತು?
0 ವೋಟ್