ಚಾಮರಾಜನಗರ | ಅರಣ್ಯಾಧಿಕಾರಿ ವರ್ಗಾವಣೆ ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

Mysore
  • ಮೂರು ವರ್ಷದಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ಸೇವೆ
  • ಕೋಲಾರಕ್ಕೆ ವರ್ಗಾವಣೆ ಮಾಡಿ ಆದೇಶ

ಮಲೆಮಹದೇಶ್ವರ ಬೆಟ್ಟದ ಅರಣ್ಯ ಉಪ ಸಂರಕ್ಷಣಾಧಿಕಾರಿ ವಿ.ಏಡುಕೊಂಡಲು ಅವರ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹನೂರು ತಾಲೂಕು ಪಂಚಾಯತ್‌ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. 

ಮೂರು ವರ್ಷಗಳಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದ ವಿ.ಏಡುಕೊಂಡಲು ಅವರನ್ನು ಕೋಲಾರಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಏಡುಕುಂಡಲು ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕು ಎಂದು ರೈತಸಂಘ ಒತ್ತಾಯಿಸಿದೆ.

“ಏಳುಕೊಂಡಲು ಅವರು ತಮ್ಮ ಅವಧಿಯಲ್ಲಿ ಮನುಷ್ಯ-ಪ್ರಾಣಿ ಸಂಘರ್ಷ, ಅರಣ್ಯದ ಅಂಚಿನಲ್ಲಿರುವ ಹಳ್ಳಿಗಳ ನಿವಾಸಿಗಳಿಗೆ ಪುನರ್ವಸತಿ, ದೂರದ ಹಳ್ಳಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸುವಂತಹ ಜನಸ್ನೇಹಿ ಕ್ರಮಗಳನ್ನು ಕೈಗೊಂಡು ಉತ್ತಮ ಕೆಲಸ ಮಾಡಿದ್ದಾರೆ. ಅಂತವರನ್ನು ವರ್ಗಾವಣೆ ಮಾಡುವುದು ಸರಿಯಲ್ಲ” ಎಂದು ಹೊನ್ನೂರು ಪ್ರಕಾಶ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ತುಮಕೂರು | ಆ.12ರಂದು ಧ್ವಜ ಸಂಹಿತೆ ತಿದ್ದುಪಡಿ ಹಿಂಪಡೆಯಲು ಆಗ್ರಹಿಸಿ ‘ಧ್ವಜ ಸತ್ಯಾಗ್ರಹ’

“ಸಚಿವ ವಿ ಸೋಮಣ್ಣ ಅವರು ಕೊಡಲೇ ಮಧ್ಯ ಪ್ರವೇಶಿಸಿ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು. ಏಡುಕೊಂಡಲು ಅವರಿಗೆ ಈ ಭಾಗದಲ್ಲಿ ಇನ್ನೂ ಒಂದು ವರ್ಷ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು” ಎಂದು ಮನವಿ ಮಾಡಿದ್ದಾರೆ.

ಆಗಸ್ಟ್ 15ರವರೆಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾಯುತ್ತೇವೆ. ಅಲ್ಲಿಯವರೆಗೆ ನಮ್ಮ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್