ಬೆಂಗಳೂರು | ದಸಂಸ ಎನ್ ಮೂರ್ತಿ ಬಣದಿಂದ ನೂತನ ರಾಷ್ಟ್ರೀಯ ಪಕ್ಷ ಸ್ಥಾಪನೆ; ಸೆ.14ರಂದು ಉದ್ಘಾಟನೆ

  • ‘ಸೆಪ್ಟೆಂಬರ್ 14ರಂದು ಅಂಬೇಡ್ಕರ್ ಭವನದಲ್ಲಿ ರಾಜ್ಯ ಸಮ್ಮೇಳನ’
  • ‘ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರ ಶ್ರೀಮಂತರ ಪಾಲಾಗಿದೆ’

“ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸೆಪ್ಟೆಂಬರ್ 14ರಂದು ಬೆಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ರಾಜ್ಯ ಸಮ್ಮೇಳನ ಮತ್ತು ನೂತನ ರಾಷ್ಟ್ರೀಯ ಪಕ್ಷದ ಉದ್ಘಾಟನೆ ಹಾಗೂ ಐತಿಹಾಸಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್ ಮೂರ್ತಿ ಬಣ)ಯ ರಾಜ್ಯಾಧ್ಯಕ್ಷ ಡಾ. ಎನ್ ಮೂರ್ತಿ ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರ ಶ್ರೀಮಂತರ ಪಾಲಾಗಿದೆ” ಎಂದು ಆರೋಪಿಸಿದರು.

“ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಯಲ್ಲಿ ಶೇಕಡಾ 40 ರಿಂದ 50 ಪರ್ಸೆಂಟ್ ಲಂಚ ನೀಡಬೇಕಾದ ವಾತವರಣ ಸರ್ಕಾರದಲ್ಲಿದೆ. ಭ್ರಷ್ಟಚಾರ ಮುಗಿಲು ಮುಟ್ಟಿದೆ. ಇದರಿಂದ ಗುಣಮಟ್ಟದ ಕಾಮಗಾರಿಗಳು ನಡೆಯುತ್ತಿಲ್ಲ” ಎಂದು ಅವರು ದೂರಿದರು.

ಈ ಸುದ್ದಿ ಓದಿದ್ದೀರಾ?  ಬಿಡಿಎ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ | ಮತ್ತೊಂದು ಸಂಕಷ್ಟದಲ್ಲಿ ಯಡಿಯೂರಪ್ಪ ಮತ್ತು ಅವರ ಕುಟುಂಬ

“ಪ್ರಾಮಾಣಿಕ ಹೋರಾಟಗಾರರು, ದೇಶ, ರಾಜ್ಯದ ಬಗ್ಗೆ ಚಿಂತನೆ ಮಾಡುವ ಪ್ರತಿಭಾವಂತರು ರಾಜಕೀಯ ಕ್ಷೇತ್ರಕ್ಕೆ ಬರಬೇಕು ಎಂಬುದು ನಮ್ಮ ಅಭಿಲಾಷೆ. ಅದ್ದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನೂತನ ರಾಷ್ಟ್ರೀಯ ಪಕ್ಷ ಉದಯವಾಗುತ್ತಿದೆ” ಎಂದು ಹೇಳಿದರು.

“ಮುಂಬರುವ ವಿಧಾನಸಭಾ ಚುನಾವಣೆಗೆ ನಮ್ಮ ನೂತನ ಪಕ್ಷದಿಂದ 60 ಪ್ರಾಮಾಣಿಕ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಲ್ಲರಿಗೂ ಸಿಗಬೇಕು” ಎಂದು ತಿಳಿಸಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್