ಒಂದು ನಿಮಿಷದ ಓದು| ಕಾಂಗ್ರೆಸ್‌ ಸ್ವಾತಂತ್ರ್ಯನಡಿಗೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗಿ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್ ‘ಸ್ವಾತಂತ್ರ್ಯ ನಡಿಗೆ’ ಪಾದಯಾತ್ರೆ ಹಮ್ಮಿಕೊಂಡಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಸೇರಿದಂತೆ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಸ್ವಾತಂತ್ರ್ಯ ನಡಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಸ್ವಾತಂತ್ರ್ಯ ನಡಿಗೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದು, ಕೈಯಲ್ಲಿ ಧ್ವಜ ಹಿಡಿದು ಪಾದಯಾತ್ರೆ ಆರಂಭಿಸಿದರು. ಈ ಪಾದಯಾತ್ರೆಯಿಂದ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಯಿತು. ಮೆಟ್ರೊ ನಿಲ್ದಾಣಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಂದಣಿ ಉಂಟಾಗಿದ್ದು, ಬಿಎಂಆರ್‍‌ಸಿಎಲ್‌ ಭದ್ರತಾ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಹಾಸ ಪಡುತ್ತಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್