ಒಂದು ನಿಮಿಷದ ಓದು | ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ರಾಹುಲ್‌ ಗಾಂಧಿ

Rahul Gandhi

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸೋಮವಾರ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಭಾರತ ಐಕ್ಯತಾ ಯಾತ್ರೆ ಶ್ರೀರಂಗಪಟ್ಟಣದ ಪರಿವರ್ತನಾ ಸ್ಕೂಲ್ ತಲುಪಿದ ಬಳಿಕ ಬಿಡುವಿನ‌ ಸಮಯದಲ್ಲಿ ಶ್ರೀರಂಗಪಟ್ಟಣದಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ವಾಹನದಲ್ಲಿ ಬಂದರು. ಅವರೊಂದಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಜೊತೆಗಿದ್ದರು.

ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ತಾಯಿ ಸೋನಿಯಾ ಗಾಂಧಿ ಅವರನ್ನು ಮಧ್ಯಾಹ್ನ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್‌ ಗಾಂಧಿ ಅವರು ಬರಮಾಡಿಕೊಳ್ಳಲಿದ್ದಾರೆ. ಬಳಿಕ ಶ್ರೀರಂಗಪಟ್ಟಣಕ್ಕೆ ವಾಹನದಲ್ಲಿ ತೆರಳಿ ಅಲ್ಲಿಂದ ಮಧ್ಯಾಹ್ನ 2 ಸುಮಾರಿಗೆ ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್ ನಿಂದ ಪಾದಯಾತ್ರೆ ಮುಂದುವರಿಸಲಿದ್ದಾರೆ.

ನಿಮಗೆ ಏನು ಅನ್ನಿಸ್ತು?
2 ವೋಟ್