ರಾಯಚೂರು | ಬಿಸಿಯೂಟ ಸೇವಿಸಿ 55 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

maski
  • ಮಸ್ಕಿ ತಾಲೂಕಿ ಅಮೀನಗಡ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ
  • ಮಕ್ಕಳ ಅನಾರೋಗ್ಯಕ್ಕೆ ಕಾರಣರಾದ ಶಾಲಾ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ

ಮಧ್ಯಾಹ್ನದ ಬಿಸಿಯೂಟ ಸೇವಿಸಿ 55 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬುಧವಾರ ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಸ್ಕಿ ತಾಲೂಕಿನ ಕವಿತಾಳ ಸಮೀಪದ ಅಮೀನಗಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥರಾಗಿರುವ ಎಲ್ಲ ಮಕ್ಕಳನ್ನು ಕವಿತಾಳ್‌ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಅಮೀನಗಡ ಗ್ರಾಮದ ಪ್ರಾಥಮಿಕ ‌ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ 240 ಮಕ್ಕಳು ಇದ್ದು, ಶಾಲೆಯಲ್ಲಿ ಎಂದಿನಂತೆ ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ಸಲುವಾಗಿ ಉಪ್ಪಿಟ್ಟು ‌ನೀಡಿದ್ದಾರೆ. ಆದರೆ ಉಪ್ಪಿಟ್ಟು ಸರಿಯಾಗಿ ಕುದಿಸದೇ ಅರೆ ಬೆಂದಿತ್ತು. ಇದನ್ನು ಸೇವಿಸಿದ ಕಾರಣ 55 ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದ್ದು ಮಕ್ಕಳು ತಲೆ ಸುತ್ತು ಬಂದು ಬಿದ್ದಿದ್ದಾರೆ. ಕೂಡಲೇ ಆಂಬುಲೆನ್ಸ್‌ ಮೂಲಕ ಎಲ್ಲ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲ 55 ಮಕ್ಕಳಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯವಾಗಿದ್ದಾರೆ. ಯಾವುದೇ ತೊಂದರೆಯಿಲ್ಲ ಆರೋಗ್ಯ ಕೇಂದ್ರದ ಡಾ ಅಮೃತ ರಾಠೋಡ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?; ಹೊಳೆನರಸೀಪುರ | ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಮತ್ತೆ ಪೊಲೀಸರ ಹಲ್ಲೆ; ರವಿಕೃಷ್ಣಾ ರೆಡ್ಡಿ ಆರೋಪ

ವಿಷಯ ತಿಳಿಯುತ್ತಿದ್ದಂತೆ ಕವಿತಾಳ್‌ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಆರ್ ಬಸನಗೌಡ ತುರ್ವಿಹಾಳ, ‌ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ, ಡಿಎಚ್ಓ ಡಾ. ಸುರೇಂದ್ರ ಬಾಬು ಹಾಗೂ ಮಸ್ಕಿ ತಹಸೀಲ್ದಾರ್ ‌ಕವಿತಾ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. 

ಘಟನೆಗೆ ಸಂಬಂಧಿಸಿದಂತೆ ಮಕ್ಕಳ ಪೋಷಕರು "ಶಾಲಾ ಆಡಳಿತ ಸಿಬ್ಬಂದಿ ಮತ್ತು ಶಿಕ್ಷಕರ ವಿರುದ್ಧ ಆರೋಪಿಸಿದ್ದು, ಬಿಸಿಯೂಟದ ಅಕ್ಕಿಯಲ್ಲಿ ಹುಳು, ಮತ್ತು ಜೇಡ ಕಸ ಕಡ್ಡಿ ಇರುತ್ತವೆ. ಸ್ವಚ್ಛತೆ ಇರುವುದಿಲ್ಲ. ಕುಡಿಯುವ ನೀರಿನ ತೊಟ್ಟಿಯನ್ನು ಸರಿಯಾಗಿ ಸ್ವಚ್ಛಗೊಳಿಸುವುದಿಲ್ಲ ಎಂದು ಮಕ್ಕಳು ನಮ್ಮಲ್ಲಿ ದೂರು ನೀಡುತ್ತಿದ್ದರು. ಆದ್ದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ" ಆಗ್ರಹಿಸಿದರು.

ಪೋಷಕರ ದೂರು ಮತ್ತು ಅರೆ ಬೆಂದ ಉಪ್ಪಿಟ್ಟು ನೀಡಿ ಮಕ್ಕಳ ಅನಾರೋಗ್ಯಕ್ಕೆ ಕಾರಣರಾದ ಶಾಲೆಯ ಮುಖ್ಯ ಗುರುಗಳು ಹಾಗೂ ಶಾಲಾ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ನಿಮಗೆ ಏನು ಅನ್ನಿಸ್ತು?
1 ವೋಟ್
Image
av 930X180