ರಾಯಚೂರು | ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಮೂವರ ಸಾವು

Raichur
  • ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ನಡೆದ ದುರ್ಘಟನೆ
  • ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಗೂಡ್ಸ್‌ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಫಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್‌ ಬಳಿ ದುರ್ಘಟನೆ ನಡೆದಿದ್ದು, ತಾಲೂಕಿನ ಕಲ್ಲೂರು ಗ್ರಾಮದ ಬಸವರಾಜ ಮಸಳಿ (40), ಭೀಮವ್ವ ಮಸಳಿ (50) ಹಾಗೂ ನರೇಶ್‌ (8) ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ?; ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ ಬೊಮ್ಮಾಯಿ ಘೋಷಣೆ

ಬೈಕ್‌ನಲ್ಲಿ ಮೂವರು ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ಸಮಯದಲ್ಲಿ ಮಾನ್ವಿಯಿಂದ ರಾಯಚೂರಿಗೆ ತೆರಳುತ್ತಿದ್ದ ಗೂಡ್ಸ್‌ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದು, ರಸ್ತೆ ಪಕ್ಕದ ಜಮೀನಿಗೆ ನುಗ್ಗಿದೆ. ಮೃತ ದೇಹಗಳು ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿ ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್