ರಾಮನಗರ | ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಗೆ ಕಪ್ಪು ಬಾವುಟ ಪ್ರದರ್ಶಿಸಿ ಬಿಜೆಪಿಗರ ಪ್ರತಿಭಟನೆ

  • ಚನ್ನಪಟ್ಟಣದಲ್ಲಿ ಸ್ವಚ್ಚತಾ ವಾಹನ ಲೋಕಾರ್ಪಣೆ ಕಾರ್ಯಕ್ರಮ
  • ನಗರಸಭಾ ಬಿಜೆಪಿ ಸದಸ್ಯರಿಂದ ಕಪ್ಪು ಬಾವುಟ ಪ್ರದರ್ಶನ

ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ನಗರಸಭಾ ಬಿಜೆಪಿ ಸದಸ್ಯರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. 

ಚನ್ನಪಟ್ಟಣ ನಗರಸಭೆ ಆವರಣದಲ್ಲಿ ಸ್ವಚ್ಛತಾ ವಾಹನ ಲೋಕಾರ್ಪಣೆ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ವಾಹನಗಳಿಗೆ ಚಾಲನೆ ನೀಡಲು ಮಾಜಿ ಮುಖ್ಯಮಂತ್ರಿಗಳು ಚನ್ನಪಟ್ಟಣಕ್ಕೆ ತೆರಳಿದ್ದರು. ಈ ವೇಳೆ, ನಗರಸಭೆಯ ಬಿಜೆಪಿ ಸದಸ್ಯರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

“ಕಾರ್ಯಕ್ರಮಕ್ಕೆ ನಮ್ಮನ್ನು ಆಹ್ವಾನಿಸಿಲ್ಲ. ಜನಪ್ರತಿನಿಧಿಗಳಾದ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಅವಮಾನ ಮಾಡಿದ್ದಾರೆ” ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಶಾಂತ್‌ ಮತ್ತು ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ. 

ಬಳಿಕ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ, “ನಾನು ಮುಖ್ಯಮಂತ್ರಿ ಆಗಿದ್ದಾಗ ನೀಡಿದ್ದ ಅನುದಾನವನ್ನು ಬಿಜೆಪಿಗರು ಲೂಟಿ ಮಾಡಿದ್ದಾರೆ. ನೀವಿಲ್ಲಿ ಡ್ರಾಮ ಮಾಡಲು ಬರಬೇಡಿ” ಎಂದು ನಗರಾಸಭೆಯ ಬಿಜೆಪಿ ಸದಸ್ಯರ ವಿರುದ್ಧ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅರಣ್ಯ ಇಲಾಖೆಯಿಂದ ರೈತರಿಗೆ ಕಿರುಕುಳ: ನಿರಂತರ ಧರಣಿ ನಡೆಸುತ್ತಿರುವ ರೈತರು

"ನಿಮ್ಮ ವಾರ್ಡ್‌ಗೆ ಸಂಬಂಧಿಸಿದ ಸಮಸ್ಯೆ ಇದ್ದರೆ ಮಾತನಾಡಬೇಕೆ ಹೊರತು ಬೀದಿಯಲ್ಲಿ ನಿಂತು ಗಲಾಟೆ ಮಾಡುವುದು ಒಳ್ಳೆ ಬೆಳವಣಿಗೆ ಅಲ್ಲ” ಎಂದಿದ್ದಾರೆ.

ಡಿವೈಎಸ್‌ಪಿ ಓಂಪ್ರಕಾಶ್‌ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿಗಳು ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರನ್ನು ಸಮಧಾನ ಪಡಿಸಲು ಹರಸಾಹಸ ಪಟ್ಟಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್