
- ನ.12 ಮತ್ತು 20 ಹಾಗೂ ಡಿ.3 ಮತ್ತು 4ರಂದು ವಿಶೇಷ ಅಭಿಯಾನ
- 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
ರಾಮನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆರಂಭಗೊಂಡಿದೆ. ಮತದಾರರ ನೋಂದಣಿ, ಹೆಸರು ಸೇರ್ಪಡೆ ಮತ್ತು ತಿದ್ದುಪಡಿ ಮಾಡಿಸಲು ಅವಕಾಶ ನೀಡಲಾಗಿದೆ. ಅರ್ಹರು ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.
“ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು, ತಿದ್ದುಪಡಿ ಮಾಡಲು, ಹೆಸರನ್ನು ತೆಗೆದುಹಾಕಲು ಅಥವಾ ವರ್ಗಾವಣೆ ಮಾಡಲು ಸಂಬಂಧ ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ಬಳಿ ನಿಗದಿತ ನಮೂನೆಯಲ್ಲಿ ಅವಶ್ಯವಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು” ಎಂದು ತಿಳಿಸಿದರು.
“ಮತದಾರರ ಪಟ್ಟಿ ಬಗ್ಗೆ ಆಕ್ಷೇಪಣೆ ಇದ್ದವರು ಡಿಸೆಂಬರ್ 8ರವರೆಗೆ ಆಕ್ಷೇಪಣೆಗಳನ್ನು ಮತಗಟ್ಟೆ ಅಧಿಕಾರಿಗಳ ಬಳಿ ಸಲ್ಲಿಸಬಹುದು. ನ.12 ಮತ್ತು 20 ಹಾಗೂ ಡಿ.3 ಮತ್ತು 4 ರಂದು ವಿಶೇಷ ಅಭಿಯಾನ ನಡೆಯಲಿದೆ. 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಹಿಂಗಾರಿನಲ್ಲಿ ಕಡಲೆ ಬಿತ್ತನೆಗೆ ಸಜ್ಜಾದ ರೈತರು; ಬೀಜ ವಿತರಣೆ
“ಓಟರ್ಸ್ ಹೆಲ್ಪ್ಲೈನ್ ಆ್ಯಪ್ ಅಥವಾ www.nvsp.in ವೆಬ್ಸೈಟ್ ಮೂಲಕ ಡಿ.12 ರವರೆಗೆ ಅರ್ಜಿ ಸಲ್ಲಿಸಬಹುದು" ಎಂದು ಮಾಹಿತಿ ನೀಡಿದರು.
ರಾಮನಗರ ತಹಶೀಲ್ದಾರ್ ವಿಜಯ್ ಕುಮಾರ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಪ್ರದೀಪ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.