ಒಂದು ನಿಮಿಷದ ಓದು| ರಾಜ್ಯದಲ್ಲಿ ಇನ್ನೂ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ನಿರಂತರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡು, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ ಜಿಲ್ಲೆಗಳಲ್ಲಿ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಮಂಡ್ಯ, ಮೈಸೂರು, ಬೆಂಗಳೂರಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

ನಿಮಗೆ ಏನು ಅನ್ನಿಸ್ತು?
1 ವೋಟ್