ಕನ್ನಡ ಶಾಲೆಗಳ ಉಳಿವಿಗಾಗಿ ನ್ಯಾಯಾಲಯ ಮೆಟ್ಟಿಲು ಹತ್ತಲು ಸಿದ್ಧ: ಕಸಾಪ ಅಧ್ಯಕ್ಷ ಮಹೇಶ ಜೋಶಿ‌ ಎಚ್ಚರಿಕೆ

chikkapete
  • ಚಿಕ್ಕಪೇಟೆಯ ಸರ್ಕಾರಿ ಕನ್ನಡ ಶಾಲೆಯ ಜಾಗವನ್ನು ಮಾರಾಟಕ್ಕೆ ಇಟ್ಟಿರುವ ಕ್ರಮ ಅಕ್ಷಮ್ಯ: ಕಳವಳ
  • ಶಾಲೆ ಮುಚ್ಚಲು ಹೊರಡಿಸಿರುವ ಆದೇಶ ಕೂಡಲೇ ವಾಪಸ್ ಪಡೆಯಬೇಕು: ಮಹೇಶ ಜೋಶಿ ಆಗ್ರಹ

ಕನ್ನಡ ಶಾಲೆಗಳನ್ನು ಉಳಿಸಿ ಕನ್ನಡ ಭಾಷೆಯುನ್ನು ಬೆಳೆಸಬೇಕು ಎನ್ನುವ ಮೂಲ ಧ್ಯೇಯ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಯಾವುದೇ ಕಾರಣಕ್ಕೂ ಕನ್ನಡ ಶಾಲೆಗಳನ್ನು ಮುಚ್ಚುವುದನ್ನು ಸಹಿಸುವುದಿಲ್ಲ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಎಚ್ಚರಿಸಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ಒಟಿಸಿ ರಸ್ತೆಯಲ್ಲಿ ಇರುವ 1945ರಲ್ಲಿ ಆರಂಭವಾದ ಸರ್ಕಾರಿ ಪ್ರೌಢಶಾಲೆಯನ್ನು ಶಿಕ್ಷಣ ಇಲಾಖೆಯ ತಕರಾರಿನ ಮಧ್ಯವೂ ಜಿಲ್ಲಾಡಳಿತ ಮುಚ್ಚಲು ಹೊರಟಿರುವ ನಡೆಯನ್ನು ಟೀಕಿಸಿ ಜೋಶಿ ಅವರು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

“ಸರ್ಕಾರ ಕನ್ನಡ ಶಾಲೆಗಳ ಬಗ್ಗೆ ಅಸಡ್ಡೆ ತೋರುವುದು ಆಗಾಗ ಕಂಡುಬರುತ್ತಿದೆ. ಈ ಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸ್ವಾತಂತ್ರ್ಯ ಪೂರ್ವದ ಶಾಲೆಯನ್ನು ಕಟ್ದಡದ ಸಮೇತ ಮಾರಾಟ ಮಾಡಿ ಬೇರೆಯವರ ಪರಭಾರೆ ಮಾಡಿದ್ದನ್ನು ಯಾವೊಬ್ಬ ಕನ್ನಡಿಗನೂ ಸಹಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? 13,800 ಸರ್ಕಾರಿ ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಮಕ್ಕಳಿದ್ದಾರೆ: ಶಿಕ್ಷಣ ಸಚಿವ ಬಿ.ಸಿ ನಾಗೇಶ್

“ಶಿಥಿಲಾವಸ್ಥೆಯಲ್ಲಿ ಇದ್ದ ಶಾಲೆಗೆ ನೂತನ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದ ಸರ್ಕಾರ, ಇದ್ದ ಶಾಲೆ ಮತ್ತು ಅದಕ್ಕೆ ಸಂಬಂಧ ಪಟ್ಟ ಆಸ್ತಿಯನ್ನು ಉಳಿಸಿಕೊಳ್ಳುವ ಬದಲು ಮಾರಾಟ ಮಾಡಲು ಹೊರಟಿರುವುದು ಯಾವ ಪುರುಷಾರ್ಥಕ್ಕೆ” ಎಂದು ಪ್ರಶ್ನಿಸಿದ್ದಾರೆ.

“ಚಿಕ್ಕಪೇಟೆಯ ಸರ್ಕಾರಿ ಪ್ರೌಢಶಾಲೆ ಮುಚ್ಚಲು ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯಬೇಕು. ಜೀರ್ಣವಾಗಿದ್ದ ಕಟ್ಟಡವನ್ನು ಹೊಸದಾಗಿ ಕಟ್ಟಿ ಪೂರ್ತಿ ಕಟ್ಟಡವನ್ನು ಶಾಲೆ ನಡೆಸುವುದಕ್ಕೆ ನೀಡಬೇಕು. ಅಗತ್ಯ ಬಿದ್ದರೆ ಕನ್ನಡ ಶಾಲೆಗಳ ಉಳಿವಿಗಾಗಿ ನಿವೃತ್ತ ನ್ಯಾಯಾಧೀಶರ ಸಲಹೆ ಪಡೆದು ಕಾನೂನು ಹೋರಾಟ ನಡೆಸಲಿದೆ” ಎಂದು ಮಹೇಶ ಜೋಶಿ ಎಚ್ಚರಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್