ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ | 1:1 ತಾತ್ಕಾಲಿಕ ಆಯ್ಕೆ ಪಟ್ಟಿ ವಾರದಲ್ಲಿ ಪ್ರಕಟ

B C Nagesh

ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತಹ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಈ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಮಂಗಳವಾರ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, "ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧಿಸಿದ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು" ಎಂದು ಹೇಳಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತಹ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿ, ಪರೀಕ್ಷೆಯ ಬಳಿಕ ದಾಖಲಾತಿಯ ಪರಿಶೀಲನೆಯನ್ನು ಕೂಡ ನಡೆಸಲಾಗಿತ್ತು. ಇದೀಗ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ.

ಸ್ಪರ್ಧಾತ್ಮಕ ಪರೀಕ್ಷೆಯ ನಂತರ, ನೇಮಕಾತಿಯಲ್ಲಿ ಅರ್ಹತೆಯನ್ನು ಪಡೆದಂತಹ ಅಭ್ಯರ್ಥಿಗಳ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ಪ್ರಕಟಿಸಲಾಗಿತ್ತು. ಅದರಂತೆ 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದರ ಮುಂದಿನ ಭಾಗವಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲು ಸರ್ಕಾರ ನಿರ್ಧರಿಸಿದೆ.

ನಿಮಗೆ ಏನು ಅನ್ನಿಸ್ತು?
3 ವೋಟ್
eedina app