ಕೋವಿಡ್‌ ಮೃತರ ಕುಟುಂಬಗಳಿಗೆ ಪರಿಹಾರ| ಅರ್ಜಿ ಸಲ್ಲಿಸಲು ಜೂನ್‌ 30 ಕೊನೆಯ ದಿನ

  • ರಾಜ್ಯದಲ್ಲಿ ಕೋವಿಡ್‌ನಿಂದ ಮೂರು ಮಂದಿ ಮೃತ
  • ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,346

ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರು ಪರಿಹಾರ ಕೋರಿ ಅರ್ಜಿ ಸಲ್ಲಿಸಲು ನಿಗದಿ ಮಾಡಿದ್ದ ಕಾಲಮಿತಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.

ಕೋವಿಡ್‌ ಅರ್ಜಿ ಸಲ್ಲಿಸಲು ಈ ಹಿಂದೆ ಮಾರ್ಚ್‌ 20ಕೊನೆಯ ದಿನವಾಗಿತ್ತು. ಅರ್ಜಿ ಸಲ್ಲಿಕೆಗೆ ಕಾಲಾವಧಿಯನ್ನು ವಿಸ್ತರಿಸಲು, ಹಲವು ಜಿಲ್ಲೆಗಳಿಂದ ಮನವಿ ಬಂದ ಕಾರಣ ಅವಧಿಯನ್ನು ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಸಂತ್ರಸ್ತ ಕುಟುಂಬಗಳಿಗೆ ತಲಾ ₹50 ಸಾವಿರ ಪರಿಹಾರ ಧನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. 

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ

ಬೆಂಗಳೂರಿನಲ್ಲಿ ಶುಕ್ರವಾರ 610 ಕೋವಿಡ್‌ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು 4,346ಕ್ಕೆ ತಲುಪಿದೆ.

AV Eye Hospital ad

ಬೆಂಗಳೂರಿನಲ್ಲಿ ಗುರುವಾರ 791 ಪ್ರಕರಣಗಳು ದೃಢಪಟ್ಟಿದ್ದವು. ಈಗ ಸಂಖ್ಯೆ ಇಳಿಕೆಯಾಗಿದೆ. ಸೋಂಕಿತರಲ್ಲಿ 462 ಮಂದಿ ಚೇತರಿಸಿಕೊಂಡಿದ್ದಾರೆ. ನಗರದ 83 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.

ನಗರದಲ್ಲಿ ಈವರೆಗೆ ಕೋವಿಡ್‌ಗೆ ಪೀಡಿತರಾದವರ ಒಟ್ಟು ಸಂಖ್ಯೆ 17.94 ಲಕ್ಷ ದಾಟಿದೆ. ಅವರಲ್ಲಿ 17.73 ಲಕ್ಷಕ್ಕೂ ಅಧಿಕ ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 16,966ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ| ₹1.47 ಕೋಟಿ ಆಸ್ತಿ ತೆರಿಗೆ ವಂಚನೆ ಪತ್ತೆ

ರಾಜ್ಯದಲ್ಲಿ ಕೋವಿಡ್‌ ಸಂಖ್ಯೆ ಏರಿಕೆ

ರಾಜ್ಯದಲ್ಲಿ ಒಂದು ದಿನದ ಅವಧಿಯಲ್ಲಿ 22,586 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. 12 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿವೆ. 634 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕು ದೃಢ ಪ್ರಮಾಣ ಶೇ 2.80ರಷ್ಟು ವರದಿಯಾಗಿದೆ. ಇಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,500ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆ ಕೋವಿಡ್‌ ಪೀಡಿತರಾದವರ ಒಟ್ಟು ಸಂಖ್ಯೆ 39.59ಲಕ್ಷ ದಾಟಿದೆ. 39.14 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 40,070ಕ್ಕೆ ಏರಿಕೆಯಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app