ರೌಡಿ ಶೀಟರ್‌ ವಿಚಾರದಲ್ಲಿ ಕಾಂಗ್ರೆಸ್‌ ಟೀಕೆಗೆ ಬೆಳಿಗ್ಗೆ ವೈಲಂಟ್‌ ಆಗಿದ್ದ ಸಿಎಂ, ಸಂಜೆ ಹೊತ್ತಿಗೆ ಸೈಲೆಂಟ್‌!

ಬಸವರಾಜ ಬೊಮ್ಮಾಯಿ
  • ಕಾಂಗ್ರೆಸ್ ಟ್ವೀಟ್‌ಗೆ ಸಂಬಂಧಿಸಿದಂತೆ ಉತ್ತರಿಸಿದ್ದೆ ಅಷ್ಟೇ ಎಂದ ಬೊಮ್ಮಾಯಿ
  • ʼನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲʼ

ನವದೆಹಲಿಯಲ್ಲಿ ಮಂಗಳವಾರ ಬೆಳಿಗ್ಗೆ “ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿ ಶೀಟರ್ಸ್ ಇದ್ದಾರೆ ಎಂದು ಲೆಕ್ಕ ಹಾಕಲಿ" ಎಂದು ಅಬ್ಬರಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಜೆ ಹೊತ್ತಿಗೆ ದನಿ ತಗ್ಗಿಸಿದ್ದು “ಈ ಘಟನೆಯನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು” ಎಂದು ವಿನಂತಿಸಿಕೊಂಡಿದ್ದಾರೆ. 

ಸೈಲಂಟ್‌ ಸುನಿಲ್‌ ಜೊತೆ ಬಿಜೆಪಿ ಸಂಸದರು ಮತ್ತು ನಾಯಕರು ವೇದಿಕೆ ಹಂಚಿಕೊಂಡ ವಿಚಾರ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಸೋಮವಾರದಿಂದ ಟ್ವೀಟ್‌ ವಾರ್‌ ನಡೆದಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಿಎಂ ಬೊಮ್ಮಾಯಿ ವಿರುದ್ಧ ರೌಡಿ ಶೀಟರ್ ವಿಚಾರವಾಗಿ ಹರಿಹಾಯ್ದಿದ್ದರು.

Eedina App

ಈ ಎಲ್ಲ ಬೆಳವಣಿಗೆ ನಂತರ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, “ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ʼಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕುʼ. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ” ಎಂದು‌ ಸ್ಪಷ್ಟಪಡಿಸಿದ್ದಾರೆ.

“ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನಿಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

AV Eye Hospital ad
ನಿಮಗೆ ಏನು ಅನ್ನಿಸ್ತು?
0 ವೋಟ್
eedina app