ಶಿವಮೊಗ್ಗ | ಕೃಷ್ಣಾಷ್ಠಮಿ ಹಿನ್ನೆಲೆಯಲ್ಲಿ ಆ.19ರಂದು ಮಾಂಸ ಮಾರಾಟ ನಿಷೇಧ

  • ಮಾಂಸ ಮಾರಾಟ ನಿಷೇಧ ಆದೇಶ ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ
  • ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ಮಾರಾಟ ನಿಷೇಧ

ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಶಿವಮೊಗ್ಗದಲ್ಲಿ ಆಗಸ್ಟ್‌ 19ರಂದು ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಮಾಯಣ್ಣಗೌಡ ತಿಳಿಸಿದ್ದಾರೆ.

“ಆಗಸ್ಟ್‌ 19ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಹಾಗಾಗಿ ಮಾಂಸ ಮಾರಾಟಗಾರರು ಅಂದು ಮಾರಾಟವನ್ನು ಸ್ಥಗಿತಗೊಳಿಸಿ, ಅಂಗಡಿ ಬಂದ್‌ ಮಾಡಬೇಕು” ಎಂದು ತಿಳಿಸಿದ್ದಾರೆ. 

“ಮಾಂಸ ಮಾರಾಟ ನಿಷೇಧದ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಾಲಿಕೆಯಿಂದ ನಗರದಾದ್ಯಂತ ಫ್ಲೆಕ್ಸ್‌ ತೆರವು ಕಾರ್ಯಾಚರಣೆ

ಸ್ವಾತಂತ್ರ್ಯ ದಿನದಂದು ಸಾವರ್ಕರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ ಸೆಲ್ವಾಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿ ನಗರ ವ್ಯಾಪ್ತಿಗೆ ಸೇರಿದ ಎಲ್ಲ ಪ್ರದೇಶಗಳಲ್ಲಿ ಎಲ್ಲ ರೀತಿಯ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್