ಶಿವಮೊಗ್ಗ| ಗೌರಿ-ಗಣೇಶ ಹಬ್ಬ; ಪೌರ ಕಾರ್ಮಿಕ ಮಹಿಳೆಯರಿಗೆ ಬಾಗಿನ

  • ಗೌರಿ ಗಣೇಶ ಹಬ್ಬದ ಸಡಗರ ಆರಂಭ
  • ಮಹಿಳಾ ಪೌರ ಕಾರ್ಮಿಕರಿಗೆ ಬಾಗಿನ

ರಾಜ್ಯದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಸಡಗರ ಆರಂಭವಾಗುತ್ತಿದ್ದು, ಹಬ್ಬದ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯಲ್ಲಿ ಪೌರ ಕಾರ್ಮಿಕರಿಗೆ ಬಾಗಿನ ನೀಡಿ ಗೌರವಿಸಲಾಗಿದೆ.

ಜಾತ್ಯತೀತ ಜನತಾದಳ ಜಿಲ್ಲಾ ಘಟಕದ ಎಂ ಶ್ರೀಕಾಂತ್ ಅವರು ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮಹಿಳಾ ಪೌರಕಾರ್ಮಿಕರಿಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಾಗಿನ ವಿತರಣೆ ಮಾಡಿದರು.

ಈ ಬಗ್ಗೆ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಮಹಿಳಾ ಪೌರ ಕಾರ್ಮಿಕರು ನಿತ್ಯ ಪ್ರಾಮಾಣಿಕವಾಗಿ ದುಡಿಯುತ್ತಿದ್ದು, ಅವರನ್ನು ಗುರುತಿಸಿ ಗೌರವಿಸುವುದು ಈ ಸಂದರ್ಭದಲ್ಲಿ ಸೂಕ್ತ ಎನಿಸಿತು" ಎಂದರು. ಮುಂದುವರೆದು, "ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಮತ್ತೆ ನಿಧಾನಗತಿಯಲ್ಲಿ ಹರಡುತ್ತಿದ್ದೆ ಹಾಗಾಗಿ ರಾಜ್ಯದ ಪ್ರತಿಯೊಬ್ಬ ಕಾರ್ಮಿಕ ಕೊರೊನಾ ಬೂಸ್ಟರ್‌ ಡೋಸ್ ಲಸಿಕೆ ಪಡೆಯಬೇಕು. ಶಿವಮೊಗ್ಗ ಜಿಲ್ಲೆಯಲ್ಲಿಯೂ ನಾವೆಲ್ಲರೂ ಮುಂಜಾಗ್ರತೆ ವಹಿಸಬೇಕಾಗಿದೆ. ಪೌರ ಕಾರ್ಮಿಕರು ಕರ್ತವ್ಯ ನಿರ್ವಹಣೆಯ ನಡುವೆಯೂ ತಮ್ಮ ಆರೋಗ್ಯ ಕಾಳಜಿ ವಹಿಸುವುದು ಅತಿಮುಖ್ಯ" ಎಂದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಅವರು ಮಾತನಾಡಿ, "ಕೊರೊನಾ ಸೋಂಕು ಉಂಟುಮಾಡಿದ್ದ ಭೀತಿಯ ನಡುವೆಯೂ ಪೌರ ಕಾರ್ಮಿಕರು ತಮ್ಮ ಜೀವವನ್ನು ಲೆಕ್ಕಿಸದೆ ದುಡಿದಿದ್ದಾರೆ. ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಅಭಿನಂದಿಸುವುದು ಎಲ್ಲರ ಕರ್ತವ್ಯವಾಗಿದೆ" ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯ 40% ಕಮಿಷನ್‌ ಭ್ರಷ್ಟಾಚಾರ ವಿರುದ್ಧ ನ್ಯಾಯಾಂಗ ತನಿಖೆ ಆಗಲೇಬೇಕು: ಸಿದ್ದರಾಮಯ್ಯ ಆಗ್ರಹ

ಮಾಜಿ ಉಪ ಮೇಯರ್ ಎಚ್. ಫಾಲಾಕ್ಷಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಮಾರಪ್ಪ, ಕಾರ್ಯದರ್ಶಿ ಎನ್ ಗೋವಿಂದ್, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ಮುಖಂಡರುಗಳಾದ ಭಾಸ್ಕರ್, ಸಿದ್ದಪ್ಪ, ಶ್ಯಾಮ್, ನರಸಿಂಹ, ಆನಂದ್, ಬಸವರಾಜ್ ಇದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180