‘ಸ್ಟೋರಿ ಆಫ್ ಸೌಜನ್ಯ’; ಸಿನಿಮಾ ಆಗಲಿದೆ ಧರ್ಮಸ್ಥಳ ಸೌಜನ್ಯ ಪ್ರಕರಣ

Date:

ಹನ್ನೊಂದು ವರ್ಷಗಳ ಹಿಂದೆ ಹಂತಕರ ಕುಕೃತ್ಯಕ್ಕೆ ಬಲಿಯಾದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಪ್ರಕರಣವನ್ನು ಆಧರಿಸಿ ಸಿನಿಮಾ ಮಾಡಲು ಜೆ.ಕೆ ವೆಂಚರ್ಸ್‌ ಮುಂದಾಗಿದೆ ಎಂದು ತಿಳಿದು ಬಂದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಮಾಡಲಾಗಿದೆ ಎಂದು ವರದಿಯಾಗಿದೆ.

2012ರ ಅಕ್ಟೋಬರ್ 9ರಂದು ಸೌಜನ್ಯಳನ್ನು ದುರುಳರು ಅಪಹರಿಸಿ, ಅತ್ಯಾಚಾರಗೈದು, ಕೊಲೆ ಮಾಡಿದ್ದರು. ಪ್ರಕರಣದಲ್ಲಿ ಅಮಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಕಳೆದ ತಿಂಗಳು (ಜೂನ್) 16ರಂದು ಆತ ನಿರಪರಾಧಿಯೆಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ.

ಈ ಬೆನ್ನಲ್ಲೇ, ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಭುಗಿಲೆದ್ದಿದೆ. ನೈಜ ಅಪರಾಧಿಗಳನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕೆಂದು ರಾಜ್ಯಾದ್ಯಂತ ಒತ್ತಾಯಗಳು ಕೇಳಿಬಂದಿವೆ. ಸೌಜನ್ಯ ಕುಟುಂಬವು ಧರ್ಮಸ್ಥಳ ದೇವಸ್ಥಾನ ಮಂಡಳಿಯೊಂದಿಗೆ ಸಂಬಂಧ ಹೊಂದಿರುವ ಮೂವರು ಜೈನ್‌ಗಳೇ ಈ ಕೃತ್ಯ ಎಸಗಿದ್ದಾರೆಂದು ಶಂಕೆ ವ್ಯಕ್ತಪಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯದಲ್ಲಿ ಸೌಜನ್ಯ ಪರ ಹೋರಾಟ ಭುಗಿಲೆದ್ದಿರುವ ಸಮಯದಲ್ಲಿಯೇ, ಪ್ರಕರಣವನ್ನಾಧರಿಸಿ ಸಿನಿಮಾ ಮಾಡಲು ಜಿಕೆ ವೆಂಚರ್ಸ್ ಮುಂದಾಗಿದ್ದು, ಟೈಟಲ್ ನೋಂದಣಿ ಮಾಡಿಸಿದೆ. ವಿ ಲವ ಅವರು ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...