ತುಮಕೂರು | ರೈತರಿಗೆ ಬಡ್ಡಿ ರಹಿತ ಸಾಲ ನೀಡುವ ಯೋಜನೆಗೆ ಚಾಲನೆ; ಎಸ್.ಟಿ ಸೋಮಶೇಕರ್

  • ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್‌ನಿಂದ ಸುವರ್ಣ ಮಹೋತ್ಸವ ಸಮಾರಂಭ
  • ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‌ಗಳ ಮೂಲಕ 33 ಲಕ್ಷ ರೈತರಿಗೆ ಬಡ್ಡಿ ರಹಿತ ಸಾಲ 

ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್‌ಗಳ ಮೂಲಕ ₹24,000 ಕೋಟಿಗಳನ್ನು 33 ಲಕ್ಷ ರೈತರಿಗೆ ಬಡ್ಡಿ ರಹಿತ ಸಾಲ ನೀಡಲು ರಾಜ್ಯ ಸರ್ಕಾರ ಚಾಲನೆ ನೀಡಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. 

ತುಮಕೂರು ಜಿಲ್ಲೆಯ ತಿಪಟೂರಿನ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಶನಿವಾರ (ಆಗಸ್ಟ್ 13) ಮರ್ಚೆಂಟ್ಸ್ ಕೋ-ಆಪರೇಟೀವ್ ಬ್ಯಾಂಕ್‌ನಿಂದ ಸುವರ್ಣ ಮಹೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. 

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅರಣ್ಯಾಧಿಕಾರಿ ವರ್ಗಾವಣೆ ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಎಸ್.ಟಿ ಸೋಮಶೇಖರ್ ಮಾತನಾಡಿ, “ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್‌ಗಳ ಮೂಲಕ 33 ಲಕ್ಷ ರೈತರಿಗೆ ಬಡ್ಡಿ ರಹಿತ ಸಾಲ ನೀಡವ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಗೆ ಏಳು ಸಾವಿರ ಕೋಟಿ ರೂ.ಗಳನ್ನು ಈಗಾಗಲೇ ಮೀಡಲಿಡಲಾಗಿದೆ” ಎಂದು ತಿಳಿಸಿದರು.

“ರಾಜ್ಯ ಸರ್ಕಾರ ರೈತರಿಗೆ ಸಾಲ ಸವಲತ್ತುಗಲನ್ನು ನೀಡಲು ಮತ್ತು ನಿರ್ವಹಣೆಗಾಗಿ ಒಂದೇ ತಂತ್ರಾಂಶವನ್ನು ಅಳವಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ₹360 ಕೋಟಿ  ಬಿಡುಗಡೆ ಮಾಡಿದೆ” ಎಂದು ಹೇಳಿರುವುದು ವರದಿಯಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್