ಉಡುಪಿ | ಮಾಣಿ ಜಲಾಶಯದಲ್ಲಿ ಹೆಚ್ಚಿದ ಒಳಹರಿವು: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನದಿ ತೀರದ ಜನರಿಗೆ ಸೂಚನೆ

Udupi
  • ಮಳೆಯಿಂದ ಹೆಚ್ಚಾದ ಜಲಾಶಯದ ಒಳಹರಿವು 
  • ಹೊರಹರಿವಿನಿಂದ ಮನೆಗಳು ಮುಳುಗುವ ಸಾಧ್ಯತೆ

ಉಡುಪಿ ಜಿಲ್ಲೆಯ ಮಾಣಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ನದಿ ಪಾತ್ರದಲ್ಲಿ ವಾಸಿಸುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ ಕಾರ್ಯನಿರ್ವಾಹಕ ಅಭಿಯಂತರರು ಸೂಚಿಸಿದ್ದಾರೆ. 

ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಪಿಟಿಸಿಎಲ್, "ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ ಇದ್ದು, ಒಳಹರಿವಿನಿಂದ ಈಗಾಗಲೇ 590.10 ಮೀ. ಮಟ್ಟಕ್ಕೆ ತಲುಪಿದೆ. ಜಲಾಶಯದ ಒಳಹರಿವು ಮುಂದುವರೆದಲ್ಲಿ ನೀರನ್ನು ಹೊರಗೆ ಬಿಡುವುದು ಅನಿವಾರ್ಯವಾಗಿದೆ. ಇದರಿಂದ ನದಿ ಪಾತ್ರದಲ್ಲಿರುವ ಜನರ ಮನೆಗಳು ಮುಳುಗುವ ಸಂಭವವಿದೆ" ಎಂದು ತಿಳಿಸಿದ್ದಾರೆ. 

ಈ ಸುದ್ದಿ ಓದಿದ್ದೀರಾ?: ಉಡುಪಿ | ರಸ್ತೆಬದಿ ನಿಂತಿದ್ದ ತಂದೆ-ಮಗನಿಗೆ ಡಿಕ್ಕಿ ಹೊಡೆದ ಬೈಕ್‌: ತಂದೆ ಸಾವು

ಮಾಣಿ ಜಲಾಶಯದ ಸುತ್ತಮುತ್ತ ಪ್ರದೇಶಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಒಳ ಹರಿವು ಹೆಚ್ಚಾಗಿದೆ. ಅಣೆಕಟ್ಟಿನ ಸುರಕ್ಷತೆಗಾಗಿ ನೀರನ್ನು ಹೊರಗೆ ಬಿಡಲು ಜಲಾಶಯ ಆಡಳಿತ ಮಂಡಳಿ ನಿರ್ಧರಿಸಿದೆ. ಆದ್ದರಿಂದ ಯಾವುದೇ ಸಮಯದಲ್ಲಾದರೂ ನದಿಗೆ ಹೆಚ್ಚಿನ ನೀರು ಹರಿಸುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180