ಉತ್ತರ ಕನ್ನಡ | ಹಿಂದು ಕಾರ್ಯಕರ್ತ ಕೊಲೆ ಆರೋಪಿಗೆ ಬಿಜೆಪಿ ಉಪಾಧ್ಯಕ್ಷ ಸ್ಥಾನ

  • ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನ ನೀಡಿ ಆದೇಶ
  • ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ನೇಮಕಾತಿ ಆದೇಶ ವಾಪಸ್

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ, ಹಿಂದು ಕಾರ್ಯಕರ್ತನ ಹತ್ಯೆ ಆರೋಪಿಗೆ ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದೆ. ತೀವ್ರ ವಿರೋಧ ವ್ಯಕ್ತವಾದ ಬಳಿಕ ಆದೇಶ ಹಿಂಪಡೆದಿದೆ.

2017ರ ಡಿಸೆಂಬರ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಗಲಭೆಯುಂಟಾಗಿ, ಹಿಂದುತ್ವವಾದಿ ಕಾರ್ಯಕರ್ತ ಪರೇಶ ಮೇಸ್ತ ಎಂಬಾತನ ಕೊಲೆಯಾಗಿತ್ತು. ಕೊಲೆ ಪ್ರಕರಣದ ಪ್ರಮುಖ ಆರೋಪಿ ಜಮಾಲ್ ಆಜಾದ್ ಅಣ್ಣಿಗೇರಿ ಎನ್ನುವವನನ್ನು ಬಂಧಿಸಲಾಗಿತ್ತು.

ಸದ್ಯ ಇದೇ ಆರೋಪಿಗೆ ಉತ್ತರ ಕನ್ನಡ ಜಿಲ್ಲಾ ವಕ್ಫ್ ಮಂಡಳಿಯ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನವನ್ನು ನೀಡಿ ಆದೇಶ ಹೊರಡಿಸಿತ್ತು.

ಈ ಸುದ್ದಿ ಓದಿದ್ದೀರಾ? : ಬಿಜೆಪಿ ಸರ್ಕಾರ 23 ಹಿಂದೂ ಕಾರ್ಯಕರ್ತರ ಸಮಾಧಿ ಮೇಲೆ ನಿಂತಿದೆ: ಚಕ್ರವರ್ತಿ ಸೂಲಿಬೆಲೆ ಕಿಡಿ 

ಸರ್ಕಾರದ ಈ ನಿರ್ಧಾರದ ವಿರುದ್ಧ ಸ್ವತಃ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್‌ ಸೇರಿದಂತೆ ಜಿಲ್ಲೆಯ ಹಿಂದು ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್