ಬಾಲ್ಯ ವಿವಾಹವೆಂಬ ದೌರ್ಜನ್ಯ | 16ರ ಬಾಲಕಿಯನ್ನು ವಿವಾಹವಾಗಿದ್ದ 52 ವರ್ಷದ ವ್ಯಕ್ತಿ ಬಂಧನ

Child Marriage

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 16 ವರ್ಷದ ಬಾಲಕಿಯನ್ನು ವಿವಾಹವಾಗಿದ್ದ 52 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿ ಅನಿಲ್ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಜುಲೈ 19 ರಂದು ಆರೋಪಿ ಅನಿಲ್ ಕಾರವಾರದ ದೇವಾಲಯವೊಂದರಲ್ಲಿ ಬಾಲಕಿ ಜೊತೆ ಮದುವೆಯಾಗಿದ್ದ ಎನ್ನಲಾಗಿದೆ. 

Eedina App

ಈ ಸುದ್ದಿ ಓದಿದ್ದೀರಾ?; ಉತ್ತರ ಕನ್ನಡ | ಪತ್ನಿಗೆ ಬೆಂಕಿ ಹಚ್ಚಿ, ತಾನು ಆತ್ಮಹತ್ಯೆಗೆ ಯತ್ನಿಸಿದ ವಿಕೃತ ಪತಿ

ಅಂಗನವಾಡಿ ಕಾರ್ಯಕರ್ತೆಯ ಮಾಹಿತಿ ಮೇರೆಗೆ ಎಚ್ಚೆತ್ತುಕೊಂಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ಪತ್ತೆ ಹಚ್ಚಿದ್ದಾರೆ. ಆರೋಪಿ ಬಂಧನದ ಭಯದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 

AV Eye Hospital ad

ಅಪ್ರಾಪ್ತೆಯ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಎರಡೂ ಕುಟುಂಬದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಮದುವೆಯಲ್ಲಿ ಭಾಗಿಯಾಗಿದ್ದ ಸಂಬಂಧಿಕರು ಸೇರಿ ಒಟ್ಟು 60 ಜನರಿಗೆ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆ ನೋಟಿಸ್ ನೀಡಿದೆ.

ಕಾರವಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತೆಯನ್ನು ಸಾಂತ್ವನ ಕೇಂದ್ರದಲ್ಲಿರಿಸಲಾಗಿದೆ.

ನಿಮಗೆ ಏನು ಅನ್ನಿಸ್ತು?
4 ವೋಟ್
eedina app