
- ವ್ಯಕ್ತಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ
- ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಐತಿಹಾಸಿಕ ಗೋಳಗುಮ್ಮಟದ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ವ್ಯಕ್ತಿ ಸಲೀಂ ತಿಕೋಟ್ಕರ್ (55) ಆತ್ಮಹತ್ಯೆಗೆ ಬಲಿಯಾದ ವ್ಯಕ್ತಿಯೆಂದು ಗುರುತಿಸಲಾಗಿದೆ.
ವಿಜಯಪುರದ ಗೋಳಗುಮ್ಮಟ ವೀಕ್ಷಣೆಗೆ ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಘಟನೆಯಿಂದ ಕೆಲಕಾಲ ಗೋಳಗುಮ್ಮಟ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವ್ಯಕ್ತಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ಯುವತಿ ಕೊಲೆ ಪ್ರಕರಣ | ಕಾಪಾಡಿ ಎಂದು ಸ್ನೇಹಿತರ ಬಳಿ ಅಳಲು ತೋಡಿಕೊಂಡಿದ್ದ ಶ್ರದ್ಧಾ
ಗೋಳಗುಮ್ಮಟ ಪೊಲೀಸ್ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಗೆ ಸಂಭಂಧಿಸಿದಂತೆ ಈ ದಿನ.ಕಾಮ್ ಗೋಳಗುಮ್ಮಟ ಪೊಲೀಸ್ ಠಾಣೆಗೆ ಸಂಪರ್ಕಿಸಿದಾಗ ಕರೆ ಸ್ವೀಕರಿಸಿಲ್ಲ.