ರಾಜ್ಯದ ಐದು ಕಡೆ ʼಜನೋತ್ಸವʼ ಮಾಡುತ್ತೇವೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

basavaraj bommai
  • ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ, ಗರಿಗೆದರಿದ ʼಜನೋತ್ಸವʼ ಕಾರ್ಯಕ್ರಮ ಸಿದ್ಧತೆ
  • ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಿಂದ ಸ್ಥಗಿತಗೊಂಡಿದ್ದ ʼಜನೋತ್ಸವʼ 

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಿಂದ ಸ್ಥಗಿತಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಒಂದು ವರ್ಷದ ಸಾಧನೆ ತಿಳಿಸುವ ʼಜನೋತ್ಸವʼ ಕಾರ್ಯಕ್ರಮ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. 

ಆಗಸ್ಟ್‌ 28ರಿಂದ ರಾಜ್ಯದ ಐದು ಕಡೆ ರಾಜ್ಯ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನಾ ‍ರ್‍ಯಾಲಿ ನಡೆಸಲು ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ.

ಶನಿವಾರ ಆರ್‌ ಟಿ ನಗರ ನಿವಾಸದ ಬಳಿ ಬೊಮ್ಮಾಯಿ ಅವರು ಸುದ್ದಿಗಾರರ ಜೊತೆ ಮಾತನಾಡಿ, " ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರ ದಲ್ಲಿ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದು. ಜುಲೈ 28 ಕ್ಕೆ ಆಗಬೇಕಿದ್ದ ಜನೋತ್ಸವವನ್ನು ಅನಿವಾರ್ಯ ಕಾರಣಗಳಿಂದ ರದ್ದು ಮಾಡಲಾಗಿತ್ತು. 10 - 15 ದಿನಗಳಿಂದ ಈ ಭಾಗದ ಜನರ ಒತ್ತಾಯ ಹೆಚ್ಚಾಗಿದೆ. ಬೇರೆ ಕಡೆ ಸಮಾವೇಶ ಮಾಡಲು ಜನ ಒಪ್ಪಲಿಲ್ಲ. ದೊಡ್ಡಬಳ್ಳಾಪುರದಿಂದಲೇ ಜನೋತ್ಸವ ಪ್ರಾರಂಭವಾಗಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೊಮ್ಮಾಯಿ ವರ್ಷ- ರಾಜ್ಯಕ್ಕೆಲ್ಲಿಯ ಹರ್ಷ| ಜನರಿಗೆ ದುಃಸ್ವಪ್ನದ ದಿನಗಳ ಕೊಡುಗೆ ಕೊಟ್ಟ ಬೊಮ್ಮಾಯಿ ಆಡಳಿತ!

“ದೊಡ್ಡಬಳ್ಳಾಪುರದಿಂದಲೇ ಜನೋತ್ಸವ ಆರಂಭ ಆಗಲಿ ಎಂಬುದು ನಮಗಿಂತಲೂ ಹೆಚ್ಚಿನ ಧೃಢ ನಿರ್ಧಾರ ಜನರದ್ದಾಗಿದೆ. ಅವರ ಉತ್ಸಾಹ ನಿರ್ಣಯಕ್ಕೆ ತಲೆಬಾಗಿ ಈ ತೀರ್ಮಾನಕ್ಕೆ ಬರಲಾಗಿದೆ. ಜನೋತ್ಸವದ ಬಗ್ಗೆ ಇಂದು ವರಿಷ್ಠ ರೊಂದಿಗೆ ಮಾತನಾಡಿ ತಿಳಿಸಲಾಗುವುದು” ಎಂದು ಹೇಳಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್