ಯಾದಗಿರಿ | ಶಾಲಾ ಕಟ್ಟಡ ಶಿಥಿಲ: ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

  • ಕಟ್ಟಡ ಕೆಡವಲು ಮೂರು ತಿಂಗಳ ಹಿಂದೆಯೇ ಆದೇಶ
  • "ಶಿಕ್ಷಣ ಇಲಾಖೆಯ ನೋಡಲ್‌ ಅಧಿಕಾರಿ ನಿರ್ಲಕ್ಷ್ಯ"

ಶಾಲೆಯ ಕಟ್ಟಡವು ಶಿಥಿಲಗೊಂಡಿದ್ದು, ಅದನ್ನು ಶ್ರೀಘ್ರವೇ ಕೆಡವು ಹೊಸ ಕಟ್ಟಣ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಲ್ಲದೇವನಹಳ್ಳಿ ಗ್ರಾಮಸ್ಥರು ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. 

"ಕಟ್ಟಡ ಶಿಥಿಲಗೊಂಡಿರುವ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೂ ತರಲಾಗಿದೆ. ಮೂರು ತಿಂಗಳ ಹಿಂದೆಯೇ (31-03-2022) ಕಟ್ಟಡವನ್ನು ಕೆಡವಲು ಅವರು ಆದೇಶವನ್ನೂ ನೀಡಿದ್ದಾರೆ. ಆದರೆ, ನೋಡಲ್‌ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ" ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Eedina App

"ಶಿಥಿಲಾವಸ್ಥೆಯಲ್ಲಿರುವ ಕಟ್ಟಡವು ಮಳೆ-ಗಾಳಿಯಿಂದ ಮಕ್ಕಳ ಮೇಲೆ ಬಿದ್ದರೆ, ಪ್ರಾಣಾಪಯಗಳು ಸಂಭವಿಸುತ್ತವೆ. ಅದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ" ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಗ್ರಾಮಸ್ಥರು ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. 

AV Eye Hospital ad
ನಿಮಗೆ ಏನು ಅನ್ನಿಸ್ತು?
1 ವೋಟ್
eedina app