ಲೋಕಸಭೆ ಚುನಾವಣೆ| ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ತಿಳಿಯಲು ಅಪ್ಲಿಕೇಶನ್ ಬಿಡುಗಡೆ

Date:

ರಾಷ್ಟ್ರ ರಾಜಧಾನಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮೊದಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ನಿಮ್ಮ ಕ್ಷೇತ್ರದ ಅಭ್ಯರ್ಥಿಯ ಕ್ರಿಮಿನಲ್ ಹಿನ್ನೆಲೆ ತಿಳಿಯಲು ಸಹಾಯ ಮಾಡುವ ಕೆವೈಸಿ (Know About Candidates-KYC) ಅಪ್ಲಿಕೇಶನ್ ಬಿಡುಗಡೆ ಮಾಡಿದೆ.

“ಜನರು ತಮ್ಮ ಕ್ಷೇತ್ರದ ಯಾವುದೇ ಚುನಾವಣಾ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಈ ಅಪ್ಲಿಕೇಶನ್ ಮೂಲಕ ತಿಳಿಯಬಹುದಾಗಿದೆ. ಆ್ಯಂಡ್ರಾಯ್ಡ್ ಮತ್ತು ಐಒಎಸ್ ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಬಹುದು” ಎಂದು ಮುಖ್ಯ ಚುನಾವಣಾ ಆಯುಕ್ತರು ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣೆ | ಮೂರು ರಾಜ್ಯಗಳಲ್ಲಿ ಏಳು ಹಂತದ ಮತದಾನ: ಎಷ್ಟು ರಾಜ್ಯಗಳಲ್ಲಿ ಒಂದೇ ಹಂತ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೊಸ ಮೊಬೈಲ್ ಅಪ್ಲಿಕೇಶನ್ ಬಗ್ಗೆ ಅಧಿಕ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತರು, “ನಾವು ಹೊಸ ಮೊಬೈಲ್ ಅಪ್ಲಿಕೇಶನ್‌ ಅನ್ನು ಆರಂಭಿಸಿದ್ದೇವೆ. ಇದು ಲೋಕಸಭೆಯಲ್ಲಿ ತಮ್ಮ ಕ್ಷೇತ್ರದಿಂದ ಕಣಕ್ಕಿಳಿಯುವ ಅಭ್ಯರ್ಥಿಯು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆಯೇ ಎಂದು ತಿಳಿಯಲು ಸಹಾಯ ಮಾಡುತ್ತದೆ. ಅಪ್ಲಿಕೇಶನ್ ಅನ್ನು ‘ನೋ ಯುವರ್ ಕ್ಯಾಂಡಿಡೇಟ್’ ಅಥವಾ ‘ಕೆವೈಸಿ’ ಎಂದು ಕರೆಯಲಾಗುತ್ತದೆ” ಎಂದು ತಿಳಿಸಿದರು.

ಕೆವೈಸಿ ಅಪ್ಲಿಕೇಶನ್‌ನ ಅಧಿಕ ವಿವರ ನೀಡಿದ ಮುಖ್ಯ ಚುನಾವಣಾ ಆಯುಕ್ತರು, “ಮತದಾರರು ತಮ್ಮ ಕ್ಷೇತ್ರಗಳ ಅಭ್ಯರ್ಥಿಗಳ ಅಪರಾಧ ದಾಖಲೆಗಳು, ಅವರ ಆಸ್ತಿ ಮತ್ತು ಸಾಲದ ಬಗ್ಗೆ ತಿಳಿದುಕೊಳ್ಳುವ ಹಕ್ಕನ್ನು ಹೊಂದಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳ ಬಳಿ ಇರುವ ಆಸ್ತಿ ಮತ್ತು ಸಾಲದ ಮಾಹಿತಿಯನ್ನು ಮತದಾರರು ಈಗ ಸ್ವತಃ ಪರಿಶೀಲಿಸಬಹುದು. ಈ ಮಾಹಿತಿ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ” ಎಂದು ಹೇಳಿದರು.

ಅಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪಕ್ಷಗಳು ಈ ನಿರ್ಧಾರದ ಹಿಂದಿನ ತಾರ್ಕಿಕತೆಯನ್ನು ವಿವರಿಸಬೇಕಾಗುತ್ತದೆ. ಜೊತೆಗೆ ಕ್ರಿಮಿನಲ್ ಹಿನ್ನೆಲೆ ಇರುವ ನಾಮಿನಿಗಳು ಕೂಡಾ ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ತಿಳಿಸಿದರು. “ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಮೂರು ಬಾರಿ ದೂರದರ್ಶನದಲ್ಲಿ ಪತ್ರಿಕೆಗಳಲ್ಲಿ ಪ್ರಕಟಿಸಬೇಕು ಅಥವಾ ಸಾರ್ವಜನಿಕಗೊಳಿಸಬೇಕು” ಎಂದು ಚುನಾವಣಾ ಸಮಿತಿಯ ಮುಖ್ಯಸ್ಥರು ತಿಳಿಸಿದರು.

ಕೆವೈಸಿ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್ ಎರಡರಲ್ಲೂ ಲಭ್ಯವಿದೆ. ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ್ದು, ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ಕ್ಯೂಆರ್ ಕೋಡ್ ಅನ್ನು ಸಹ ಹಂಚಿಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ, ಆಯೋಗವು ಲೋಕಸಭೆ ಚುನಾವಣೆಯನ್ನು ಏಳು ಹಂತಗಳಲ್ಲಿ ನಡೆಸಲಾಗುವುದು ಎಂದು ಘೋಷಿಸಿದೆ. ಆದರೆ ಆಂಧ್ರಪ್ರದೇಶ, ಒಡಿಶಾ, ಅರುಣಾಚಲ ಮತ್ತು ಸಿಕ್ಕಿಂ ನಾಲ್ಕು ರಾಜ್ಯಗಳಿಗೆ ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ಪ್ರತ್ಯೇಕ ಏಕ ಹಂತಗಳಲ್ಲಿ ನಡೆಯಲಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು...