ಶಾಲಾ ಬಿಸಿಯೂಟದ ಬೇಳೆ ಕದ್ದ ಮುಖ್ಯ ಶಿಕ್ಷಕ: ದೂರು ದಾಖಲು

Malavalli
  • ಮಧ್ಯಾಹ್ನದ ಬಿಸಿಯೂಟಕ್ಕೆ ಸರ್ಕಾರದಿಂದ ಬೇಳೆ ಸರಬರಾಜು
  • ಕದ್ದು ಸಾಗಿಸುತ್ತಿರುವುದನ್ನು ವಿಡಿಯೋ ಮಾಡಿದ ಸ್ಥಳೀಯರು

ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಸರ್ಕಾರ ಒದಗಿಸುವ ತೊಗರಿ ಬೇಳೆಯನ್ನು ಮುಖ್ಯ ಶಿಕ್ಷಕರೊಬ್ಬರು ಕದ್ದು ಅಂಗಡಿಗೆ ಸಾಗಿಸುತ್ತಿದ್ದ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. 

ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾರೆಗೌಡನಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಕಾಳ ರಾಜೇಗೌಡ ಎಂಬವರ ವಿರುದ್ಧ ಗ್ರಾಮಸ್ಥರು ದೂರು ನೀಡಿದ್ದಾರೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಖ್ಯ ಶಿಕ್ಷಕರಿಗೆ ನೋಟೀಸ್ ಜಾರಿಗೊಳಿಸಿದ್ದಾರೆ.

ಆರೋಪಿತ ಮುಖ್ಯ ಶಿಕ್ಷಕರು ಎರಡು ಚೀಲ ತೊಗರಿ ಬೇಳೆಯನ್ನು ಆಟೋದಲ್ಲಿ ಹಲಗೂರಿನ ಅಂಗಡಿಗೆ ಸಾಗಿಸುವಾಗ ಸ್ಥಳೀಯರು ವಿಡಿಯೋ ಚಿತ್ರೀಕರಿಸಿದ್ದಾರೆ. ಶಿಕ್ಷಕನ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. 

ಈ ಸುದ್ದಿ ಓದಿದ್ದೀರಾ?: ಚಿಕ್ಕಮಗಳೂರು | ಹಿರಿಯರಿಗೆ ಗೌರವ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಕಾನೂನು ಪ್ರಾಧಿಕಾರ ಕಾರ್ಯದರ್ಶಿ

ಗ್ರಾಮಸ್ಥರ ದೂರಿನ ಆಧಾರದ ಮೇಲೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಜಯಪ್ರಕಾಶ್ ಅವರು ಮುಖ್ಯ ಶಿಕ್ಷಕ ಕಾಳ ರಾಜೇಗೌಡ, ಆಟೋ ಚಾಲಕ ಹಾಗೂ ಬೇಳೆ ಖರೀದಿಸಿದ್ದ ಹೊನ್ನೇಗೌಡರ ವಿರುದ್ಧ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಾಸ್‌ ಮೀಡಿಯಾ ಮೈಸೂರು ವಲಯ ಸಂಯೋಜಕ ಮೋಹನ್‌ ಮಾಹಿತಿ ಆಧರಿಸಿದ ವರದಿ
ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180