ದಕ್ಷಿಣ ಕನ್ನಡ | ಸುರತ್ಕಲ್ ಟೋಲ್‌ ಸುಲಿಗೆಯಲ್ಲಿ ಬಿಜೆಪಿ ಶಾಸಕ-ಸಂಸದರ ಪಾಲೆಷ್ಟು: ಬಿ ಕೆ ಹರಿಪ್ರಸಾದ್ ಕಿಡಿ

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ ಟೋಲ್‌ಗೇಟ್‌ಅನ್ನು ಹೆಜಮಾಡಿ ಟೋಲ್‌ ಜೊತೆಗೆ ವಿಲೀನ ಮಾಡಲಾಗಿದೆ. ಎರಡೂ ಟೋಲ್‌ಗಳಲ್ಲಿ ವಸೂಲಿ ಮಾಡುತ್ತಿದ್ದ ಟೋಲ್‌ ಸುಂಕವನ್ನು ಒಟ್ಟಿಗೆ ಹೆಜಮಾಡಿ ಟೋಲ್‌ನಲ್ಲಿ ಸಂಗ್ರಹಿಸಲು ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಸರ್ಕಾರದ ಈ ನಡೆಯ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. 

ಟೋಲ್‌ ವಿಲೀನದ ವಿರುದ್ಧ ಟ್ವೀಟ್‌ ಮಾಡಿರುವ ಹರಿಪ್ರಸಾದ್ ಬಿಜೆಪಿ ಶಾಸಕ, ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಕರಾವಳಿಯ ಬಿಜೆಪಿ ಸಂಸದರು, ಶಾಸಕರು ಟೋಲ್‌ಗೇಟ್‌ ಗಳ ಪರ ವಕಾಲತ್ತು ವಹಿಸುತ್ತಿರುವುದು ಯಾಕೆ? ಸುಲಿಗೆ ಮಾಡುತ್ತಿರುವ ಹಣದಲ್ಲಿ ತಮ್ಮ ಪಾಲೆಷ್ಟು ಬಹಿರಂಗಪಡಿಸಿ? ಮತಕೊಟ್ಟ ಜನರಿಗೆ ದ್ರೋಹ ಮಾಡಿ, ಬೆನ್ನ ತಟ್ಟಿಕೊಂಡಿರುವ ಸಂಸದರದ್ದು ಲಜ್ಜೆಗೆಟ್ಟ ಪರಮಾವಧಿ.ಅಕ್ರಮ ಟೋಲ್ ಅಂತೆ ನಿಮ್ಮನ್ನ ಎತ್ತಂಗಡಿ ಮಾಡುವ ಕಾಲ ಬಂದಾಯ್ತು‌" ಎಂದಿದ್ದಾರೆ. 

Eedina App

"ಕರಾವಳಿ ಸಂಸದರು ಯಾವ ಪುರುಷಾರ್ಥಕ್ಕೆ ಸ್ವಯಂ ಬೆನ್ನುತಟ್ಟಿಕೊಂಡಿದ್ದು ಬಹಿರಂಗಪಡಿಸಬೇಕು. ವಾಹನ ಸವಾರರ ಬೆವರಿನ ಹಣವನ್ನ ಜಿಗಣೆಯಂತೆ ರಕ್ತ ಹೀರುತ್ತಿದ್ದ ಸುರತ್ಕಲ್ ಟೋಲ್‌ಗೇಟ್‌ ರದ್ದು ಪಡಿಸಿ, ಹೆಜಮಾಡಿ ಟೋಲ್‌ ಅಲ್ಲಿ ದುಪ್ಪಟ್ಟು ಸುಲಿಗೆ ಮಾಡಲು ವಿಲೀನಗೊಳಿಸಿದ್ದಕ್ಕಾ?" ಎಂದು ಕಿಡಿಕಾರಿದ್ದಾರೆ.

 

AV Eye Hospital ad

"ಅಕ್ರಮ ಟೋಲ್‌ಗೇಟ್‌ ತೆರವುಗೊಳಿಸಲು ಕರಾವಳಿಯಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದ್ರೆ, ತಾವು ಉಳಿಸಲು ಶಕ್ತಿಮೀರಿ ಶ್ರಮಿಸಿರುವ ತೆರೆ ಮರೆಯ ಕಸರತ್ತನ್ನ ಬಹಿರಂಗಪಡಿಸುತ್ತಿರಾ? ಅಥವಾ ಕಾರು ಅಲ್ಲಾಡಿಸಿದ ಕಾರಣಕ್ಕೆ ಬಹಿರಂಗವಾಗಿ ಕರಾವಳಿಗರ ಮೇಲೆ ಸೇಡು ತೀರಿಸಿಕೊಂಡಿದ್ದನ್ನ ಒಪ್ಪಿಕೊಳ್ಳುತ್ತಿರಾ?" ಎಂದು ಸಂಸದ ನಳಿನ್‌ ಕುಮಾರ್‌ ಕಠೀಲ್ ಅವರನ್ನು ಟೀಕಿಸಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್
eedina app