ʼಆಜ್ ತಕ್ʼನ ನಿರೂಪಕ ಸುಧೀರ್ ಚೌಧರಿ ಕಾರ್ಯಕ್ರಮ ರದ್ದುಗೊಳಿಸಿದ ಐಐಟಿ-ಬಾಂಬೆ

Date:

ಆಜ್‌ ತಕ್‌ ನ ನಿರೂಪಕ ಸುಧೀರ್‌ ಚೌಧರಿ ಅವರನ್ನು ಇ-ಸಮ್ಮಿಟ್‌ 2024 ರಲ್ಲಿ ರವಿವಾರ ಭಾಷಣ ನೀಡಲು ಅಹ್ವಾನಿಸಿದ್ದ ಐಐಟಿ-ಬಾಂಬೆ, ಆದಿವಾಸಿಗಳು ಮತ್ತು ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಕುರಿತಂತೆ ಚೌಧರಿ ಅವರ ಹೇಳಿಕೆಗಳಿಗೆ ವಿದ್ಯಾರ್ಥಿಗಳ ಆಕ್ಷೇಪದ ಹಿನ್ನೆಲೆಯಲ್ಲಿ ಅವರ ಭಾಷಣವನ್ನು ಸಂಸ್ಥೆ ರದ್ದುಗೊಳಿಸಿದೆ.

ಸಂಸ್ಥೆಯ ಸಭಾಂಗಣದಲ್ಲಿ ಚೌಧರಿ ಭಾಷಣ ನೀಡಬೇಕಿತ್ತು, ಆದರೆ ಅವರ ಸ್ಥಾನದಲ್ಲಿ ಶಾಪ್‌ಕ್ಲೂಸ್‌ ಸ್ಥಾಪಕಿ ರಾಧಿಕಾ ಅಗರ್ವಾಲ್‌ ಅವರನ್ನು ಸಂಸ್ಥೆ ಆಹ್ವಾನಿಸಿದ ಕಾರಣ ಅವರು ಭಾಷಣ ನೀಡಿದ್ದಾರೆ.

ಕಳೆದ ಶನಿವಾರ ಆರಂಭಗೊಂಡ ಈ ಕಾರ್ಯಕ್ರಮವನ್ನು ವಿದ್ಯಾರ್ಥಿ ಸಂಘಟನೆ ಇ-ಸೆಲ್‌ ಆಯೋಜಿಸಿತ್ತು. ಆದರೆ ಕಾರ್ಯಕ್ರಮದ ಭಾಷಣಕಾರರ ಕುರಿತ ಅಂತಿಮ ನಿರ್ಧಾರವನ್ನು ಸಂಸ್ಥೆಯ ಆಡಳಿತ ತೆಗೆದುಕೊಳ್ಳುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಚೌಧರಿ ಈ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಉದ್ಯಮಶೀಲತೆಯ ಕುರಿತು ಮಾತನಾಡಬೇಕಿತ್ತು. ಆದರೆ ಅವರ ಭಾಷಣ ಕೈಬಿಡಲಾಗಿರುವ ಕುರಿತು ಅವರಿಗೆ ಶನಿವಾರ ರಾತ್ರಿ ಮಾಹಿತಿ ನೀಡಲಾಯಿತು.

ಜನವರಿ 31ರ ತಮ್ಮ ಪ್ರೈಮ್‌ ಟೈಮ್‌ ಶೋ “ಬ್ಲ್ಯಾಕ್‌ ಎಂಡ್‌ ವೈಟ್‌”ನಲ್ಲಿ ಈಡಿಯಿಂದ ಬಂಧಿತ ಹೇಮಂತ್‌ ಸೊರೇನ್‌ ಕುರಿತು ಪ್ರತಿಕ್ರಿಯಿಸಿದ್ದ ಚೌಧರಿ, ಸೊರೇನ್‌ ಮತ್ತವರ ಕುಟುಂಬ “ಆದಿವಾಸಿಗಳಲ್ಲ” ಏಕೆಂದರೆ ಅವರು ದೊಡ್ಡ ಬಂಗಲೆಗಳಲ್ಲಿ ವಾಸಿಸುತ್ತಾರೆ ಎಂದಿದ್ದರು.

ಸೊರೇನ್‌ ಜೈಲಿನಲ್ಲಿ ದಿನದೂಡಬೇಕಾದ ಕುರಿತು ಪ್ರತಿಕ್ರಿಯಿಸಿದ್ದ ಅವರು “ಕಾಡಿನಲ್ಲಿ ವಾಸಿಸುವ ಆದಿವಾಸಿಯಂತೆ 20, 30, 40 ವರ್ಷ ಹಿಂದೆ ಹೋಗುವುದು,” ಎಂದಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...