ಭಾರತ ಸತ್ಯದ ಹಾದಿಯಲ್ಲಿ ನಡೆದು ಜಗತ್ತಿಗೆ ದಾರಿ ತೋರಿಸಿದೆ: ರಾಹುಲ್ ಗಾಂಧಿ

  • ಮಹಾತ್ಮ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕಾಂಗ್ರೆಸ್‌
  • ನೆಹರೂ ಭಾಷಣ ಉಲ್ಲೇಖಿಸಿ ಟ್ವೀಟ್ ಮಾಡಿದ ರಾಹುಲ್

75 ವರ್ಷಗಳ ಹಿಂದೆ ದೇಶವು ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ನಡೆಯುವ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಕ್ಷವು "ಆಝಾದಿ ಗೌರವ ಯಾತ್ರೆ" ನಡೆಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿ, ಸ್ವಜನಪಕ್ಷಪಾತದ ಕುರಿತು ಆರೋಪಿಸಿದ್ದರು. ಮೋದಿಯವರ ಟೀಕೆಗೆ ರಾಹುಲ್ ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಭಾರತದ 76ನೇ ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲರಿಗೂ ಶುಭ ಕೋರಿದರು.

“ಆಝಾದಿ ಗೌರವ ಯಾತ್ರೆ”ಯ ಭಾಗವಾಗಿ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಿಂದ ತೀಸ್ ಜನವರಿ ರಸ್ತೆಯಲ್ಲಿರುವ ಮಹಾತ್ಮ ಗಾಂಧಿಯವರ ಸಮಾಧಿಯವರೆಗೆ ಮೆರವಣಿಗೆ ನಡೆಸಿದರು.

ಪ್ರಿಯಾಂಕಾ ಗಾಂಧಿ ವಾದ್ರಾ, ಅಂಬಿಕಾ ಸೋನಿ, ಗುಲಾಂ ನಬಿ ಆಝಾದ್, ಆನಂದ್ ಶರ್ಮಾ, ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಸ್ವಾತಂತ್ರ್ಯದ ಅಮೃತ ಮಹೋತ್ಸವ| ವಿಧಾನಸೌಧ ಆವರಣದ ಮಹಾತ್ಮಾ ಗಾಂಧಿ ಬೃಹತ್‌ ಪ್ರತಿಮೆಗೆ ಅಗೌರವ

ತಮ್ಮ ಟ್ವೀಟ್‌ನಲ್ಲಿ ರಾಹುಲ್ ಗಾಂಧಿ,  ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ 'ಟ್ರಸ್ಟ್ ವಿತ್ ಡೆಸ್ಟಿನಿ' ಭಾಷಣದ ಉಲ್ಲೇಖವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಭಾರತದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯವನ್ನು ಎತ್ತಿ ತೋರಿಸುವ ಚಿತ್ರಗಳ ಸಂಯೋಜನೆಯನ್ನು ಪೋಸ್ಟ್ ಮಾಡಿದ್ದಾರೆ.

"ಪುರಾತನ, ಶಾಶ್ವತ ಹಾಗೂ ನಿತ್ಯನೂತನ ಭಾರತ ನಮ್ಮ ಪ್ರೀತಿಯ ಮಾತೃಭೂಮಿ, ನಾವು ನಮ್ಮ ಪೂಜ್ಯ ನಮನಗಳನ್ನು ಸಲ್ಲಿಸುತ್ತೇವೆ. ಭಾರತಮಾತೆಯ ಸೇವೆಗೆ ನಮ್ಮನ್ನು ಹೊಸದಾಗಿ ತೊಡಗಿಸಿಕೊಳ್ಳುತ್ತೇವೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು! ಜೈ ಹಿಂದ್" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್