ಇಟಲಿಯಲ್ಲಿ ಸೋನಿಯಾ ಗಾಂಧಿ ತಾಯಿ ನಿಧನ

Sonia Gandhi Mother
  • ಟ್ವಿಟರ್‌ನಲ್ಲಿ ಮಾಹಿತಿ ನೀಡಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್
  • ಇಟಲಿಯಲ್ಲಿ ವಾಸವಿದ್ದ ಸೋನಿಯಾ ತಾಯಿ ಪಾವೊಲಾ ಮೈನೋ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಆಗಸ್ಟ್ 27ರ ಶನಿವಾರದಂದು ಇಟಲಿಯ ತಮ್ಮ ಮನೆಯಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆಯು ಆಗಸ್ಟ್ 30ರ ಮಂಗಳವಾರ ನಡೆಯಿತು ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಜೈರಾಮ್ ರಮೇಶ್ ಬುಧವಾರ ಸಂಜೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, "ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27ನೇ ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿರುವ ಅವರ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು," ಎಂದು ತಿಳಿಸಿದ್ದಾರೆ.

Eedina App

90ರ ಹರೆಯದವರಾದ ಪಾವೊಲಾ ಮೈನೋ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಕಳೆದ ಆಗಸ್ಟ್ 23ರಂದು ತಾಯಿಯನ್ನು ಭೇಟಿಯಾಗಲು ಇಟಲಿಗೆ ತೆರಳಿದ್ದರು.

AV Eye Hospital ad

ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಇಟಲಿಯಲ್ಲಿದ್ದು, ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
7 ವೋಟ್
eedina app