ಟಿಕೆಟ್ ನೀಡದಿದ್ದರೆ ಬಿಜೆಪಿಗೆ ವರುಣ್ ಗಾಂಧಿ ರಾಜೀನಾಮೆ ಸಾಧ್ಯತೆ!

Date:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದರೆ ಸ್ವತಂತ್ರ ಸ್ಪರ್ಧಿಯಾಗಿ ಸ್ಪರ್ಧಿಸಲು ಉತ್ತರ ಪ್ರದೇಶದ ಫಿಲಿಬಿಟ್ ಕ್ಷೇತ್ರದ ಸಂಸದ ಬಿಜೆಪಿ ಸಂಸದ ವರುಣ್ ಗಾಂಧಿ ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2009 ಹಾಗೂ 2019ರ ಚುನಾವಣೆಯಲ್ಲಿ ಪಿಲಿಭಿಟ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ವರುಣ್ ಗಾಂಧಿ ಮೂರನೇ ಬಾರಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದರು.

ಆದರೆ ರಾಜ್ಯ ಬಿಜೆಪಿಯ ಹಲವು ನಾಯಕರು ಕೋರ್‌ ಕಮಿಟಿ ಸಭೆಯಲ್ಲಿ ವರುಣ್ ಗಾಂಧಿಗೆ ಟಿಕೆಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಟಿಕೆಟ್ ಸಿಗುವುದು ಅನುಮಾನದ ಹಿನ್ನೆಲೆಯಲ್ಲಿ ಸ್ವತಂತ್ರ ಸ್ಪರ್ಧಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ವರ್ಷ ಸಭೆಯೊಂದರಲ್ಲಿ ಮಾತನಾಡಿದ್ದ ವರುಣ್ ಗಾಂಧಿ. ಹತ್ತಿರದ ಸಾಧುವಿಗೆ ಅಡ್ಡಿಪಡಿಸಬೇಡಿ, ಮತ್ತೊಬ್ಬ ನಾಯಕರು ಯಾವಾಗ ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಟೀಕಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

2023ರ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಓರ್ವ ರೋಗಿ ಮೃತಪಟ್ಟ ಕಾರಣ ಅಮೇಥಿಯ ಸಂಜಯ್‌ ಗಾಂಧಿ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಿದ್ದನ್ನು ವರುಣ್ ಗಾಂಧಿ ಅಪಹಾಸ್ಯ ಮಾಡಿದ್ದರು.

80 ಲೋಕಸಭಾ ಕ್ಷೇತ್ರದ ಉತ್ತರ ಪ್ರದೇಶದಲ್ಲಿ ಬಿಜೆಪಿ ಈಗಾಗಲೇ ನರೇಂದ್ರ ಮೋದಿ, ರಾಜನಾಥ್ ಸಿಂಗ್‌, ಹೇಮಾ ಮಾಲಿನಿ,ಸ್ಮೃತಿ ಇರಾನಿ ಸೇರಿದಂತೆ 51 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪಿಲಿಭಿಟ್‌ ಕ್ಷೇತ್ರಕ್ಕೆ ಬಿಜೆಪಿಯಿಂದ ವರುಣ್‌ ಗಾಂಧಿ ಅಥವಾ ಮೇನಕಾ ಗಾಂಧಿ ಬದಲು ಬೇರೆ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ವರುಣ್‌ ಗಾಂಧಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಮೊಮ್ಮಗ. ಅವರ ತಂದೆ ಸಂಜಯ್‌ ಗಾಂಧಿ ಇನ್ನೋರ್ವ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಸಹೋದರ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ...

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ ಡ್ರಗ್ಸ್ ವಶ

ಭಯೋತ್ಪಾದನಾ ವಿರೋಧಿ ದಳ(ಎಟಿಎಸ್) – ನಾರ್ಕೋಟಿಕ್ಸ್ ಕಂಟ್ರೋಲ್‌ ಬ್ಯೂರೊ(ಎನ್‌ಸಿಬಿ) ಜಂಟಿ ಕಾರ್ಯಾಚರಣೆಯ...

ಗಡಿ ದಾಟಿದ ಬಾಂಧವ್ಯ: 19 ವರ್ಷದ ಪಾಕ್ ಯುವತಿಗೆ ಚೆನ್ನೈನಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

ದ್ವೇಷ ಹಗೆಗಳ ಗಡಿ ಮಾನವೀಯತೆ ನೆಲೆಯಲ್ಲಿ ಹೇಗೆ ಸಮ್ಮಿಳಿತವಾಗುತ್ತದೆ ಎಂಬುದಕ್ಕೆ ಈ...