ಕಾಶ್ಮೀರ | ಉಗ್ರರಿಂದ ಎರಡು ಪ್ರತ್ಯೇಕ ಗ್ರೆನೇಡ್ ದಾಳಿ: ಓರ್ವ ಪೊಲೀಸ್ ಸಹಿತ ಇಬ್ಬರಿಗೆ ಗಾಯ

Kashmir
  • ದಾಳಿಕೋರರನ್ನು ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ಆರಂಭ
  • ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಗ್ರೆನೇಡ್ ಎಸೆದ ಉಗ್ರರು

ಕಾಶ್ಮೀರದಲ್ಲಿ ಸ್ವಾತಂತ್ರ್ಯ ದಿನದಂದು ನಡೆದ ಎರಡು ಪ್ರತ್ಯೇಕ ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್ ಮತ್ತು ನಾಗರಿಕ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ

ಮೊದಲ ಘಟನೆಯಲ್ಲಿ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದು, ನಾಗರಿಕರೊಬ್ಬರು ಗಾಯಗೊಂಡರು. ಗಾಯಗೊಂಡ ನಾಗರಿಕನನ್ನು ಕರಣ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆಂದು ವರದಿಯಾಗಿದೆ.

 

ಮತ್ತೊಂದು ದಾಳಿಯಲ್ಲಿ, ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಯ ಹೊರಗೆ ಗ್ರೆನೇಡ್‌ಗಳನ್ನು ಎಸೆಯಲಾಗಿದೆ. ಈ ವೇಳೆ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಕಳೆದ ಮೂರು ದಿನಗಳಿಂದ ಸರಣಿ ದಾಳಿಗಳು ನಡೆಯುತ್ತಿವೆ. ನಿನ್ನೆ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದರು.

ಫೋಟೋ ಕೃಪೆ: ಎಎನ್‌ಐ
ನಿಮಗೆ ಏನು ಅನ್ನಿಸ್ತು?
0 ವೋಟ್