
- ಧರ್ಮದ ಹೆಸರಲ್ಲಿ ದ್ವೇಷ ಭಾಷಣಗಳು ಹೆಚ್ಚುತ್ತಿರುವುದು ದುರಂತ
- ವೈಜ್ಞಾನಿಕ ಭಾವನೆ ಬೆಳೆಸಿಕೊಳ್ಳಬೇಕು ಎಂದ ಸುಪ್ರೀಂ ಕೋರ್ಟ್
ದ್ವೇಷ ಭಾಷಣಗಳ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, "ಇದು 21ನೇ ಶತಮಾನ. ನಾವು ದೇವರನ್ನು ಯಾವ ಮಟ್ಟಕ್ಕೆ ಇಳಿಸಿದ್ದೇವೆ" ಎಂದು ವಿಷಾದ ವ್ಯಕ್ತಪಡಿಸಿದೆ.
ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡುವವರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ)ಯ ಅಡಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ಕೋರಿ ಸಲ್ಲಿಸಲಾದ ಮನವಿಯನ್ನು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ವಿಚಾರಣೆ ನಡೆಸುತ್ತಿದೆ.
"ಇದು 21ನೇ ಶತಮಾನ. ನಾವು ಇಂದು ದೇವರನ್ನು ಯಾವ ಮಟ್ಟಕ್ಕೆ ಇಳಿಸಿದ್ದೇವೆ. 51 ನೇ ವಿಧಿಯು ನಾವು ವೈಜ್ಞಾನಿಕ ಮನೋಭಾವವನ್ನು ಹೊಂದಿರಬೇಕು ಎಂದು ಹೇಳುತ್ತದೆ. ಆದರೆ, ಧರ್ಮದ ಹೆಸರಲ್ಲಿ ದ್ವೇಷ ಭಾಷಣಗಳು ಹೆಚ್ಚುತ್ತಿರುವುದು ದುರಂತ" ಎಂದು ನ್ಯಾಯಪೀಠ ವಿಷಾದ ವ್ಯಕ್ತಪಡಿಸಿದೆ.
ಈ ಸುದ್ದಿ ಓದಿದ್ದೀರಾ?: ದ್ವೇಷ ಭಾಷಣ | ಪ್ರತಿಕ್ರಿಯೆ ಕೋರಿ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್
ಅ.20ರಂದು ಸುಪ್ರೀಂಕೋರ್ಟ್, ದ್ವೇಷ ಭಾಷಣಗಳ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಸಂಬಂಧ ಪ್ರತಿಕ್ರಿಯೆ ಕೋರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.