ಬೆಂಗಳೂರು |‌ ಧ್ವಜ ಕಟ್ಟಲು ಟೆರೇಸ್‌ ಹತ್ತಿದ್ದ ಯುವಕ ಕೆಳಗೆ ಬಿದ್ದು ಸಾವು

dead
  • ಟೆರೇಸ್‌ ಮೇಲಿಂದ ಬಿದ್ದು ಸುಳ್ಯ ಮೂಲದ ವ್ಯಕ್ತಿ ಸಾವು
  • ಹೆಣ್ಣೂರು ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮನೆ ಮನೆ ಮೇಲೆ ತಿರಂಗಾ ಹಾರಿಸಲು ಕೇಂದ್ರ ಸರ್ಕಾರ ಕರೆ ನೀಡಿದೆ. ಈ ನಿಟ್ಟಿನಲ್ಲಿ ‍ ಧ್ವಜ ಕಟ್ಟಲು ಟೆರೇಸ್‌ ಮೇಲೆ ಏರಿದ್ದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಎಚ್‌ಬಿಆರ್‌ ಲೇಔಟ್‌ನಲ್ಲಿ ನಡೆದಿದೆ. 

ಸುಳ್ಯ ಮೂಲದ ವಿಶುಕುಮಾರ್ (33) ಮೃತ ದುರ್ದೈವಿ. ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ ವಿಶು ಕುಮಾರ್‌, ಭಾನುವಾರ (ಆಗಸ್ಟ್‌ 14) ಟೆರೇಸ್ ಮೇಲೆ ಹತ್ತಿ ತ್ರಿವರ್ಣ ಧ್ವಜ ಕಟ್ಟುತ್ತಿದ್ದರು. ಈ ವೇಳೆ ಆಯತಪ್ಪಿ ಬಿದ್ದ ಕಾರಣ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ನಿಷೇಧಾಜ್ಞೆ ಜಾರಿ ನಡುವೆಯೇ ಯುವಕನಿಗೆ ಚೂರಿ ಇರಿತ

ಘಟನೆ ಸಂಬಂಧ ವಿಶು ಕುಮಾರ್ ತಂದೆ ನಾರಾಯಣ ಭಟ್ ಅವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್