ದೇಶವ್ಯಾಪಿ ಮುಷ್ಕರ| ಕೇರಳ, ತಮಿಳುನಾಡಿನಲ್ಲಿ ಸಂಪೂರ್ಣ ಬೆಂಬಲ, ಉಳಿದೆಡೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ವಿವಿಧ ಜನ ವಿರೋಧಿ ನೀತಿಗಳ ವಿರುದ್ಧ ಕೇಂದ್ರ ವ್ಯಾಪಾರ ಒಕ್ಕೂಟಗಳ ಜಂಟಿ ವೇದಿಕೆಯು ಕರೆ ನೀಡಿರುವ ಬಂದ್‌ಗೆ ವಿವಿಧ ರಾಜ್ಯಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ಉಳಿದೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ವಲಯದ ಎಲ್ಲಾ ಬ್ಯಾಂಕ್‌ಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಬ್ಯಾಂಕ್ ವ್ಯವಹಾರಗಳು ಸ್ತಬ್ಧವಾಗಿವೆ.

ಬಿಎಸ್ಎನ್ಎಲ್, ಸಾರಿಗೆ, ರೈಲ್ವೇ ಹಾಗೂ ಆಟೋ ಚಾಲಕರು ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಸಾವಿರಾರು ಸದಸ್ಯರು ಚೆನ್ನೈ ನಗರದಲ್ಲಿ ಬೃಹತ್ ಪ್ರತಿಭಟನಾ ಜಾಥ ನಡೆಸಿದರು. 

ಕೋಲ್ಕತ್ತಾದ ಜಾಧವ್‌ಪುರ್ ರೈಲ್ವೇ ನಿಲ್ದಾಣಕ್ಕೆ ಮೆರವಣಿಗೆ ನಡೆಸಿದ ಎಡರಂಗ ಬೆಂಬಲಿತ ಕಾರ್ಮಿಕರು ರೈಲುಗಳನ್ನು  ತಡೆದು ಪ್ರತಿಭಟನೆ ನಡೆಸಿದರು. 

ಕೇರಳದ ರಾಜಧಾನಿ ತಿರುವನಂತಪುರಂನ ಕೇಂದ್ರ ಬಸ್ ನಿಲ್ದಾಣ ಮತ್ತು ನಗರದ ರಸ್ತೆಗಳು ಜನಸಂಚಾರವಿಲ್ಲದೆ ಖಾಲಿಯಾಗಿದೆ.

ಎಐಟಿಯುಸಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ವಿಜಯವಾಡಾದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. 

ಒಡಿಶಾದ ಬೆರ್ಹಾಂಪುರ್ ರೈಲ್ವೇ ನಿಲ್ದಾಣದ ಎದುರು ಎಐಬಿಎ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಒಡಿಶಾದ ಭುವನೇಶ್ವರದಲ್ಲಿ ಬಿಕೆಎಂಯು, ಎಐಕೆಎಸ್ ಸಂಘಟನೆಗಳ ಕಾರ್ಯಕರ್ತರು ರೈಲ್ವೇ ಹಳಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೇಂದ್ರ ವ್ಯಾಪಾರ ಒಕ್ಕೂಟಗಳ ಜಂಟಿ ವೇದಿಕೆಯು ಕರೆ ನೀಡಿರುವ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯು ಸಂಪೂರ್ಣ ಬೆಂಬಲ ಸೂಚಿಸಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app