ಬಿಲ್ಕಿಸ್ ಬಾನು ಪ್ರಕರಣ | ಜೈಲಿನಿಂದ ಎಲ್ಲ 11 ಅಪರಾಧಿಗಳ ಬಿಡುಗಡೆ

bilkis bano
  • ಗೋಧ್ರಾ ಉಪ ಕಾರಾಗೃಹದಿಂದ 11 ಅಪರಾಧಿಗಳ ಬಿಡುಗಡೆ
  • ಗುಜರಾತ್‌ ಸರ್ಕಾರದ ಕ್ಷಮಾಪಣೆ ನೀತಿ ಅನ್ವಯ ಬಿಡುಗಡೆ

ಗುಜರಾತ್‌ನಲ್ಲಿ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಎಲ್ಲ ಹನ್ನೊಂದು ಅಪರಾಧಿಗಳನ್ನು  ಬಿಡುಗಡೆ ಮಾಡಲಾಗಿದೆ.

ಗುಜರಾತ್‌ ಸರ್ಕಾರದ ಕ್ಷಮಾಪಣೆ ನೀತಿ ಅನ್ವಯ ಗೋಧ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

2002ರಲ್ಲಿ ಗುಜರಾತ್ ಹತ್ಯಾಕಾಂಡದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, 2008ರ ಜನವರಿ 21ರಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈ ಸಿಬಿಐ ನ್ಯಾಯಾಲಯ ಆದೇಶಿಸಿತ್ತು. ಈ ತೀರ್ಪನ್ನು ಮುಂಬೈ ಹೈಕೋರ್ಟ್‌ ಎತ್ತಿ ಹಿಡಿದಿತ್ತು. 

ಈ ಸುದ್ದಿ ಓದಿದ್ದೀರಾ?: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ದೇವನಹಳ್ಳಿ: ಸಚಿವ ಸುಧಾಕರ್

ಅಪರಾಧಿಗಳು 15 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ಅವರಲ್ಲಿ ಒಬ್ಬರು ಅವಧಿಪೂರ್ವ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಈತನ ಮನವಿಯನ್ನು ಕ್ಷಮಾದಾನ ನೀತಿಯಡಿ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಸರ್ಕಾರ ರಚಿಸಿದ ಸಮಿತಿ ಅಪರಾಧಿಗಳ ಬಿಡುಗಡೆಗೆ ಶಿಫಾರಸ್ಸು ಮಾಡಿತ್ತು. 

ನಿಮಗೆ ಏನು ಅನ್ನಿಸ್ತು?
0 ವೋಟ್