ಒಂದು ನಿಮಿಷದ ಓದು | ಬೆಂಗಳೂರಿನಲ್ಲಿ ಪಿಎಫ್‌ಐ ಸಂಘಟನೆಗೆ ಸೇರಿದ 19 ಮಂದಿ ವಿರುದ್ಧ ಪ್ರಕರಣ ದಾಖಲು

kg halli

ಕಾನೂನು ಬಾಹಿರ ಚಟುವಟಿಕೆ ಮತ್ತು ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಆರೋಪದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ 19 ಮಂದಿ ವಿರುದ್ಧ ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಈ ಸಂಬಂಧ ಮನ್ಸೂರ್ ಖಾನ್‌ ಯಾಸೀರ್‌ ಪಾಷಾ ಸೇರಿದಂತೆ ಒಟ್ಟು 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಿಸಿಬಿ ಹಾಗೂ ನಗರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕೆ ಜಿ ಹಳ್ಳಿ ಮತ್ತು ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಪಿಎಫ್ಐ ಸಂಘಟನೆಯ ಮುಖಂಡರು, ಕಾರ್ಯಕರ್ತರು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಲಾಗಿದೆ.  

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಎನ್‌ಐಎ ದಾಳಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 32 ಮಂದಿ ವಶಕ್ಕೆ

ಇಂದು ದೇಶದ ಹತ್ತಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ರಾಜ್ಯ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಪಿಎಫ್‌ಐ ಸಂಘಟನೆಗೆ ಸೇರಿದ 20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. 

ಕರ್ನಾಟಕದಿಂದ ಅನಿಸ್ ಅಹ್ಮದ್, ಅಫ್ಸರ್ ಪಾಷಾ, ಅಬ್ದುಲ್ ವಾಹಿದ್ ಸೇಟ್, ಯಾಸರ್ ಅರಾಫತ್ ಹಸನ್, ಮೊಹಮ್ಮದ್ ಶಕೀಬ್ (ಶಾಕಿಫ್), ಮುಹಮ್ಮದ್ ಫಾರೂಕ್ ಉರ್ ರೆಹಮಾನ್, ಶಾಹಿದ್ ನಾಸಿರ್ ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಟ್ವೀಟ್ ಮೂಲಕ ತಿಳಿಸಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್