
- ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಸುವಂತೆ ಆಗ್ರಹಿಸಿದ ಡಿಸಿಡಬ್ಲ್ಯೂ
- ವಿಚಾರಣೆ ಸಮಯದಲ್ಲಿ ಕೆಲವು ತಪ್ಪುಗಳು; ಸ್ವಾತಿ ಮಲಿವಾಲ್ ಆರೋಪ
2012ರಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಅಪರಾಧಿಗಳ ಮರಣದಂಡನೆ ಶಿಕ್ಷೆಯನ್ನು ಖುಲಾಸೆಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ತೀರ್ಪು ಪ್ರಶ್ನಿಸಿ ಭಾರತ ಸರ್ಕಾರದ ಗೃಹ ಕಾಯದರ್ಶಿ ಅವರಿಗೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪತ್ರ ಬರೆದಿದ್ದಾರೆ.
ಸುಪ್ರೀಂ ತೀರ್ಪಿನ ಬಗ್ಗೆ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.
“2012ರ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಲವು ಪ್ರಶ್ನೆಗಳನ್ನು ಎತ್ತಿದೆ. ಪ್ರಕರಣದ ದುರ್ಬಲ ತನಿಖೆ ಮತ್ತು ವಿಚಾರಣೆಯ ಸಮಯದಲ್ಲಿ ಮಾಡಿದ ಕೆಲವು ತಪ್ಪಿನಿಂದಾಗಿ, ಆರೋಪಿಗಳ ಬಿಡುಗಡೆ ವಿಷಯ ಮುನ್ನೆಲೆಗೆ ಬಂದಿದೆ. ಇಂತಹ ನಿರ್ಲಕ್ಷ್ಯ ಇನ್ನೆಂದಿಗೂ ನಡೆಯಬಾರದು. ಈ ಕುರಿತು ಉನ್ನತ ಮಟ್ಟದ ಸಮಿತಿ ರಚಿಸುವಂತೆ ಆಗ್ರಹಿಸಿ ಭಾರತ ಸರ್ಕಾರದ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದೇವೆ” ಎಂದು ಸ್ವಾತಿ ಮಲಿವಾಲ್ ಪತ್ರದೊಂದಿಗೆ ಟ್ವೀಟ್ ಮಾಡಿದ್ದಾರೆ.
19 ವರ್ಷದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸುರಕ್ಷತೆ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದ್ದಾರೆ. ದೆಹಲಿ ನ್ಯಾಯಾಲಯವು 2014ರಲ್ಲಿ ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಅಪರಾಧಿಗಳ ಶಿಕ್ಷೆ ರದ್ದುಪಡಿಸಿತ್ತು. ಈ ವಿಚಾರಣೆ ನಡೆದ ಕೆಲವೇ ದಿನಗಳಲ್ಲಿ ಡಿಸಿಡಬ್ಲ್ಯೂ ಈ ಕುರಿತು ಕ್ರಮಕ್ಕೆ ಮುಂದಾಗಿದೆ.
“ಆರೋಪಿಗಳು ತಲೆಮರೆಸಿಕೊಂಡಿದ್ದು, ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿರುವುದರಿಂದ, ಮೃತ ಯುವತಿಯ ಕುಟುಂಬದ ಸದಸ್ಯರ ರಕ್ಷಣೆಗಾಗಿ ಭದ್ರತೆಯ ಅಗತ್ಯವಿದೆ” ಎಂದು ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ?: ದೇಸಿ ನುಡಿಗಟ್ಟು - ಕುಮಟಾ ಸೀಮೆ | ಅಳ್ವಿ ಪ್ರದೇಸ ಅಂದ್ರೆ ವಜ್ರದ ಗಣಿಗಿಂತ್ಲೂ ಹೆಚ್ಚು ನಮ್ಗೆ
ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮುಂದಾದ ಸಂತ್ರಸ್ತೆ ಕುಟುಂಬ
ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಸಂತ್ರಸ್ತೆಯ ತಂದೆ, “ಮೂವರು ಆರೋಪಿಗಳ ಶಿಕ್ಷೆಯನ್ನು ರದ್ದುಗೊಳಿಸಲು ಅವಕಾಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದೇವೆ. ಮನವಿಯು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದು, ತೀರ್ಪನ್ನು ಮರುಪರಿಶೀಲಿಸುವಂತೆ ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸುತ್ತೇವೆ" ಎಂದಿದ್ದರು.
"ಎಲ್ಲ ಅಪರಾಧಿಗಳಿಗೆ ಮರಣದಂಡನೆ ಆಗಲೇಬೇಕು. ಅತ್ಯಾಚಾರವೆಸಗಿ, ಕ್ರೂರವಾಗಿ ಕೊಲೆಮಡಿದ ಅಪರಾಧಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ನನ್ನ ಮಗಳಿಗೆ ನ್ಯಾಯ ಸಿಗುತ್ತದೆ" ಎಂದು ಅವರು ಆಗ್ರಹಿಸಿದ್ದರು.
2019ರಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣ
2012ರ ಫೆಬ್ರುವರಿಯಲ್ಲಿ 19 ವರ್ಷದ ಯುವತಿಯನ್ನು ಮೂವರು ದುಷ್ಕರ್ಮಿಗಳು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿಕೊಲೆ ಮಾಡಿದ್ದರು. ಈ ಘಟನೆ ನಡೆದ ಮೂರು ದಿನಗಳ ನಂತರ ಆಕೆಯ ಛಿದ್ರಗೊಂಡ ದೇಹ ಹರಿಯಾಣದ ಹೊಲದಲ್ಲಿ ಪತ್ತೆಯಾಗಿತ್ತು.
ಈ ಅತ್ಯಾಚಾರವೆಸಗಿದ್ದ ಪ್ರಕರಣದಡಿ ಮೂವರು ಆರೋಪಿಗಳ ವಿರುದ್ಧ ದೆಹಲಿಯ ಛವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ರವಿ ಕುಮಾರ್, ರಾಹುಲ್ ಮತ್ತು ವಿನೋದ್ ಅಪಹರಣದ ವಿವಿಧ ಆರೋಪಗಳ ಅಡಿಯಲ್ಲಿ ಬಂಧಿಸಲಾಗಿತ್ತು.