ಅಟಲ್‌ ಬಿಹಾರಿ ವಾಜಪೇಯಿ ಪುಣ್ಯತಿಥಿ| ರಾಷ್ಟ್ರಪತಿ ಮುರ್ಮ, ಪ್ರಧಾನಿ ಮೋದಿ ಸೇರಿ ಗಣ್ಯರ ಗೌರವ ನಮನ

PM Narendra Modi pay tributes to Vajapayee
  • 2014ರಲ್ಲಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರದಾನ
  • ವಾಜಪೇಯಿ ಅವರಿಗೆ ದ್ರೌಪದಿ ಮುರ್ಮು, ಅಮಿತ್ ಶಾ ಗೌರವ

ಮಾಜಿ ಪ್ರಧಾನ ಮಂತ್ರಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ನಾಲ್ಕನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಬುಧವಾರ (ಆಗಸ್ಟ್ 16) ಬೆಳಿಗ್ಗೆ ಗೌರವ ನಮನ ಸಲ್ಲಿಸಿದ್ದಾರೆ. 

ಬೆಳಿಗ್ಗೆ ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ರಾಷ್ಟ್ರಪತಿ ಹಾಗೂ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. 

ಇವರೊಂದಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿಇತರೆ ಗಣ್ಯರು ಭೇಟಿ ನೀಡಿ ಗೌರವ ಸಲ್ಲಿಸಿದರು. 

ಈ ಸುದ್ದಿ ಓದಿದ್ದೀರಾ?  ಒಂದು ನಿಮಿಷದ ಓದು| ಕ್ರೀಡಾ ತಾರೆಯರಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ

ವಾಯಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ ಸಹ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯ ವಾಜಪೇಯಿ ಅವರು 2018ರ ಆಗಸ್ಟ್ 16 ರಂದು ನಿಧನರಾಗಿದ್ದರು. 

1998-2004ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ ಅವರು, ಬಿಜೆಪಿಯಿಂದ ದೇಶದ ಪ್ರಧಾನ ಮಂತ್ರಿಯಾದ ಮೊದಲ ನಾಯಕ. ಅವರು ಮೂರು ಭಾರಿ ಪ್ರಧಾನಿಯಾಗಿದ್ದರು. 

ವಾಜಪೇಯಿ ಅವರು 1996 ರಲ್ಲಿ ಮತ್ತು 1998 ರಿಂದ 2004 ರ ನಡುವೆ ಎರಡು ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಡಿಸೆಂಬರ್ 25ರ ಅವರ ಅವರ ಜನ್ಮದಿನವನ್ನು ಪಕ್ಷವು 'ಉತ್ತಮ ಆಡಳಿತ ದಿನ' ಎಂದು ಆಚರಣೆ ಮಾಡುತ್ತದೆ. 2014 ರಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರಿಗೆ ಭಾರತ ರತ್ನ ಪ್ರದಾನ ಮಾಡಲಾಗಿತ್ತು.

ನಿಮಗೆ ಏನು ಅನ್ನಿಸ್ತು?
0 ವೋಟ್