ದೆಹಲಿ | 'ದಿ ವೈರ್' ಮುಖ್ಯಸ್ಥರ ಮನೆಗಳ ಮೇಲೆ ಸಿಸಿಬಿ ದಾಳಿ ; ಎಲೆಕ್ಟ್ರಾನಿಕ್ ಸಾಧನಗಳು ವಶಕ್ಕೆ

The Wire Team photo
  • ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ದೂರಿನ ಬಳಿಕ ಬೆಳವಣಿಗೆ
  • ಮೆಟಾ ಜೊತೆಗೆ ಸಂಬಂಧ ಹೊಂದಿರುವ ಬಗ್ಗೆ ವರದಿ ಪ್ರಕಟಿಸಿದ್ದ 'ದಿ ವೈರ್'

‘ದಿ ವೈರ್’ ಸುದ್ದಿ ಮಾಧ್ಯಮ ವೆಬ್‌ಸೈಟ್‌ನ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ ವೇಣು ಅವರ ಮನೆಗಳಿಗೆ ದೆಹಲಿ ಕೇಂದ್ರಿಯಾ ತನಿಖಾ ದಳದ(ಸಿಸಿಬಿ) ಪೊಲೀಸರು ಸೋಮವಾರ ದಾಳಿ ನಡೆಸಿದ್ದು, ಎಲೆಕ್ಟ್ರಾನಿಕ್ ಸಾಧನಗಳು ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ.

ಮೆಟಾ ಜೊತೆಗೆ ಸಂಬಂಧ ಹೊಂದಿರುವ ಬಗ್ಗೆ ವರದಿ ಪ್ರಕಟಿಸಿದ್ದ 'ದಿ ವೈರ್' ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ದೆಹಲಿ ಪೊಲೀಸರಿಗೆ ದೂರು ನೀಡಿದ ಬೆಳವಣಿಗೆಯ ಬೆನ್ನಲ್ಲೇ ಈ ದಾಳಿ ನಡೆದಿದೆ.

ಮಾಳವೀಯ ಅವರು ಸಾಮಾಜಿಕ ಮಾಧ್ಯಮ ಸಂಸ್ಥೆ ಮೆಟಾದಲ್ಲಿ (ಫೇಸ್‌ಬುಕ್‌ ಮಾತೃಸಂಸ್ಥೆ) ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು 700ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ದಿ ವೈರ್, ಅದರ ಸಂಸ್ಥಾಪಕ ಮತ್ತು ಸಂಪಾದಕರ ವಿರುದ್ಧ ದೂರು ದಾಖಲಿಸಿದ್ದರು.

AV Eye Hospital ad
THE WiRe Raid CCB Police delhi

ವಂಚನೆ, ನಕಲಿ ಮತ್ತು ಕ್ರಿಮಿನಲ್ ಬೆದರಿಕೆಗಾಗಿ ದಿ ವೈರ್ ವಿರುದ್ಧ ಕಳೆದ ಶುಕ್ರವಾರ, ಮಾಳವಿಯಾ ಅವರು ವಿಶೇಷ ಪೊಲೀಸ್ ಆಯುಕ್ತರಿಗೆ (ಅಪರಾಧ) ದೂರು ನೀಡಿದ್ದರು. ಅದರನ್ವಯ 'ದಿ ವೈರ್' ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್ ಮತ್ತು ಸಂಪಾದಕ ಸಿದ್ಧಾರ್ಥ್ ಭಾಟಿಯಾ, ಎಂ ಕೆ ವೇಣು ಮತ್ತು ಜಾಹ್ನವಿ ಸೇನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು.

"ಸಿದ್ಧಾರ್ಥ್ ವರದರಾಜನ್, ಎಂ ಕೆ ವೇಣು ಮತ್ತು ಇತರರ ನಿವಾಸಗಳಿಂದ ಮೊಬೈಲ್‌, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಾರಿಗೂ ನೋಟಿಸ್ ನೀಡಿಲ್ಲ ಮತ್ತು ಇಂದು ಯಾವುದೇ ವಿಚಾರಣೆ ನಡೆದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು" ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೊರ್ಬಿ ತೂಗು ಸೇತುವೆ ಕುಸಿತ : ಪ್ರಧಾನಿ ಮೋದಿ ಬಿಟ್ಟ ಬಾಣವನ್ನು ಅವರಿಗೇ ಬಿಟ್ಟ ನೆಟ್ಟಿಗರು!

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಫೋಟೋ : ಅಮಿತ್ ಷಾ ಪುತ್ರ ಜಯ್‌ಶಾ, 'ದಿ ವೈರ್' ವಿರುದ್ಧ ಹಾಕಿದ್ದ ಮೊಕದ್ದಮೆಯೊಂದರ ವಿಚಾರಣೆ ಸಂದರ್ಭ(2017)
ನಿಮಗೆ ಏನು ಅನ್ನಿಸ್ತು?
4 ವೋಟ್
eedina app