ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಇ ಪಳನಿಸ್ವಾಮಿ ನೇಮಕ ಅಸಿಂಧು: ಮದ್ರಾಸ್‌ ಹೈಕೋರ್ಟ್

Palaniswamy
  • ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿಗೆ ಭಾರೀ ಹಿನ್ನಡೆ
  • ಜುಲೈ 11ಕ್ಕೂ ಮುನ್ನ ಇದ್ದ ಸ್ಥಿತಿ ಮುಂದುವರಿಸುವಂತೆ ಸೂಚನೆ

ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿಗೆ ಭಾರೀ ಹಿನ್ನಡೆಯಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವರ ನೇಮಕ ಅಸಿಂಧು ಎಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ. 

ಜುಲೈ 11ರಂದು ಸಾಮಾನ್ಯ ಮಂಡಳಿ ಸಭೆ ನಡೆಯುವ ಮೊದಲಿದ್ದ ಪರಿಸ್ಥಿತಿಯನ್ನೇ ಮುಂದುವರಿಸಲು ನ್ಯಾಯಾಲಯ ಆದೇಶಿಸಿದೆ. ಜನರಲ್ ಕೌನ್ಸಿಲ್ ಸಭೆ ಕರೆಯುವ ಅಧಿಕಾರ ಸಂಯೋಜಕರು ಮತ್ತು ಜಂಟಿ ಸಂಯೋಜಕರಿಗೆ ಮಾತ್ರ ಇದೆ ಎಂದು ನ್ಯಾಯಾಲಯ ಹೇಳಿದೆ. 

ಜುಲೈ 11ರಂದು ನಡೆದ ಎಐಎಡಿಎಂಕೆ ಪಕ್ಷದ ಸಾಮಾನ್ಯ ಮಂಡಳಿ ಸಭೆ ಮತ್ತು ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನೀರ್​ ಸೆಲ್ವಂ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರ ಪೀಠವು ಇಂದು ವಿಚಾರಣೆ ನಡೆಸಿದೆ.

ಈ ಸುದ್ದಿ ಓದಿದ್ದೀರಾ?: ನೇಮಕವಾದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಆಜಾದ್ ರಾಜೀನಾಮೆ

ಈ ವೇಳೆ ಪನೀರ್​ ಸೆಲ್ವಂ ಅವರನ್ನು ಉಚ್ಛಾಟನೆ ಮಾಡಿರುವ ಆದೇಶಕ್ಕೆ ನ್ಯಾಯಾಲಯ ತಡೆ ನೀಡಿದೆ. ಅಲ್ಲದೆ, ಜುಲೈನಲ್ಲಿ ನಡೆದ ಜನರಲ್ ಕೌನ್ಸಿಲ್ ಸಭೆಯನ್ನೂ ನ್ಯಾಯಾಲಯ ರದ್ದುಗೊಳಿಸಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್