ಅಕ್ರಮ ಹಣ ವರ್ಗಾವಣೆ | ಮಂತ್ರಿ ಗ್ರೂಪ್‌ನ ₹300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

MantriSquare
  • ಆಕರ್ಷಕ ಬೆಲೆಯಲ್ಲಿ ಫ್ಲಾಟ್‌ ನಿರ್ಮಿಸಿಕೊಡುವುದಾಗಿ ಆಮಿಷ
  • ಹೂಡಿಕೆದಾರರಿಗೆ ಕೋಟ್ಯಂತರ ರೂ. ವಂಚಿಸಿರುವ ಆರೋಪ

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಂತ್ರಿ ಡೆವಲಪರ್ಸ್ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ 300 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.

ಮಂತ್ರಿ ಸೆರೆನಿಟಿ, ಮಂತ್ರಿ ವೆಬ್‌ಸಿಟಿ, ಮಂತ್ರಿ ಎನರ್ಜಿಯಾ ಸೇರಿದಂತೆ ವಿವಿಧ ಯೋಜನೆಗಳಡಿ ಆಕರ್ಷಕ ಬೆಲೆಯಲ್ಲಿ ಫ್ಲಾಟ್‌ ನಿರ್ಮಿಸಿಕೊಡುವುದಾಗಿ ನಂಬಿಸಿ ಮಂತ್ರಿ ಗ್ರೂಪ್‌ ಡೆವಲಪರ್ಸ್‌ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವುದಾಗಿ ಆರೋಪಿಸಿ ಹೂಡಿಕೆದಾರರು ಬೆಂಗಳೂರಿನ ಕಬ್ಬನ್‌ ಪಾರ್ಕ್ ಮತ್ತು ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸರ್ಕಾರದ ಇಲಾಖೆಯಲ್ಲ: ಸುಪ್ರೀಂ ಕೋರ್ಟ್

ಮತ್ತೊಂದೆಡೆ ಇ.ಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) ಅಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಇದರ ಭಾಗವಾಗಿ ಇ.ಡಿ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಮಂತ್ರಿ ಗ್ರೂಪ್‌ ಕಂಪನಿ ಮೇಲೆ ದಾಳಿ ನಡೆಸಿ ಹಣಕಾಸು ವ್ಯವಹಾರದ ಹಲವಾರು ದಾಖಲೆ ಪತ್ರ ವಶಕ್ಕೆ ಪಡೆದಿದ್ದರು. ಜತೆಗೆ ಕಂಪನಿ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಶೀಲ್‌ ಪಿ ಮಂತ್ರಿ ಅವರನ್ನು ಜೂನ್‌ 24ರಂದು ಬಂಧಿಸಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್