
- ಪ್ರಕರಣ ಸಂಬಂಧ ಮೂರು ವಾರಗಳ ಒಳಗೆ ಆಕ್ಷೇಪಣೆ ಸಲ್ಲಿಸಿ
- ರಾಜ್ಯ ಸರ್ಕಾರಕ್ಕೆ ನ್ಯಾ.ಪಿ ಬಿ ವರಾಳೆ ಅವರಿದ್ದ ಪೀಠ ಆದೇಶ
ಗಾಣಿಗ ಸಮುದಾಯದ ಗುರುಪೀಠಕ್ಕೆ ಅನುದಾನ ಮತ್ತು ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್ಗೆ ಜಮೀನು ಮಂಜೂರು ಮಾಡಿದ್ದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಂಬಂಧ ಮೂರು ವಾರಗಳ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
2011ರ ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್ನಲ್ಲಿ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಗಾಣಿಗ ಸಮುದಾಯದ ಗುರುಪೀಠಕ್ಕೆ ಐದು ಕೋಟಿ ರೂ. ಅನುದಾನ ಮತ್ತು ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್ಗೆ 10 ಎಕರೆ ಜಮೀನು ಮಂಜೂರು ಮಾಡಿದ್ದರು.
ಈ ಸಂಬಂಧ ಮಾಹಿತಿ ಹಕ್ಕು ಕಾರ್ಯಕರ್ತ ಎನ್ ಹನುಮೇಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ, ಪ್ರತಿವಾದಿ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿ.7ಕ್ಕೆ ಮುಂದೂಡಿತು.
ಈ ಸುದ್ದಿ ಓದಿದ್ದೀರಾ?: ಮುರುಘಾ ಮಠದಲ್ಲಿ ಮಕ್ಕಳ ಅಕ್ರಮ ದತ್ತು; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ 'ಒಡನಾಡಿ' ಆಗ್ರಹ
ಮಾಜಿ ಎಂಎಲ್ಸಿ ಬಿ ಜೆ ಪುಟ್ಟಸ್ವಾಮಿಯವರು ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಟ್ರಸ್ಟ್ಗೆ ದಾಸನಪುರ ಬಳಿ 10 ಎಕರೆ ಗೋಮಾಳ ಜಮೀನನ್ನು ಮಂಜೂರು ಮಾಡಲಾಗಿತ್ತು.
"ಟ್ರಸ್ಟ್ ಶಿಕ್ಷಣ ಸಂಸ್ಥೆ ಹೊಂದಿರದಿದ್ದರೂ ಜಮೀನು ಮಂಜೂರಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಬೇಕು" ಎಂದು ಪಿಐಎಲ್ನಲ್ಲಿ ಉಲ್ಲೇಖಿಸಲಾಗಿತ್ತು.