ಫ್ಲೆಕ್ಸ್‌ ವಿವಾದ| ಸಹಜ ಸ್ಥಿತಿಯತ್ತ ಶಿವಮೊಗ್ಗ; ಮುಂದುವರಿದ ಪೊಲೀಸ್ ಭದ್ರತೆ

shivamogga-cops
  • ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳು ಪುನಾರಂಭ
  • ಕೆಲವೆಡೆ ಅಂಗಡಿ ಬಂದ್‌ ಮಾಡಿಸಿರುವ ಪೊಲೀಸರು

ಸಾವರ್ಕರ್‌ ಫ್ಲೆಕ್ಸ್‌ ವಿವಾದದಿಂದಾಗಿ ಕಳೆದ ಮೂರು ದಿನಗಳಿಂದ ಉದ್ವಿಗ್ನ ಸ್ಥಿತಿಯಲ್ಲಿದ್ದ ಶಿವಮೊಗ್ಗ ಇಂದು ಸಹಜ ಸ್ಥಿತಿಯತ್ತ ಮರಳಿದೆ. ಶಾಲಾ ಕಾಲೇಜುಗಳು ಪುನಾರಂಭವಾಗಿದ್ದು, ವಾಹನ ಸಂಚಾರ ಆರಂಭವಾಗಿದೆ. ಆದರೂ, ನಗರದಲ್ಲಿ ಪೊಲೀಸ್‌ ಕಣ್ಗಾವಲು ಮುಂದುವರೆದಿದೆ. 

ಸಿಟಿ ಬಸ್‌ಗಳು, ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬೆರಳೆಣಿಕೆಯಷ್ಟು ಆಟೋಗಳು ಮಾತ್ರ ರಸ್ತೆಗಿಳಿದಿವೆ. ಫ್ಲೆಕ್ಸ್ ವಿವಾದದಿಂದ ನಗರದಲ್ಲಿ ವ್ಯಾಪಾರ, ವಹಿವಾಟು ಸ್ಥಗಿತಗೊಂಡು ಕೋಟ್ಯಂತರ ರೂ. ನಷ್ಟವಾಗಿದೆ. ಇಂದು ಅಂಗಡಿ-ಮುಂಗಟ್ಟುಗಳನ್ನು ತೆರೆಯಲಾಗಿದ್ದು, ವ್ಯಾಪಾರ ವಹಿವಾಟು ನಡೆಯುತ್ತಿದೆ. ಕೆಲವೆಡೆ ಪೊಲೀಸರೇ ಅಂಗಡಿಗಳನ್ನು ಬಂದ್‌ ಮಾಡಿಸಿದ್ದಾರೆ.  

ಈ ಸುದ್ದಿ ಓದಿದ್ದೀರಾ?: ದಕ್ಷಿಣಕನ್ನಡ| ಭಯದ ವಾತಾವರಣ ಸೃಷ್ಟಿಸುವ ಸಲುವಾಗಿ ಪ್ರವೀಣ್‌ ಹತ್ಯೆ: ಎನ್‌ಐಎ

ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಪೊಲೀಸ್ ಬಿಗಿ ಬಂದೋಬಸ್ತ್ ಮುಂದುವರೆಸಲಾಗಿದೆ.

ಅಮೀರ್ ಅಹಮದ್ ಸರ್ಕಲ್, ಗಾಂಧಿ ಬಜಾರ್ ಹಾಗೂ ಹಳೆ ಶಿವಮೊಗ್ಗ ಭಾಗದಲ್ಲಿ ಪೊಲೀಸರನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯೋಜನೆ ಮಾಡಲಾಗಿದೆ. ದೊಡ್ಡಪೇಟೆ, ತುಂಗಾ ನಗರ ಹಾಗೂ ಕೋಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್