ಎಸಿಬಿ ರಚನೆ ರದ್ದುಗೊಳಿಸಿದ ಹೈಕೋರ್ಟ್‌; ಮರುಜೀವ ಪಡೆದ ಲೋಕಾಯುಕ್ತ

Lokayukta
  • ರಾಜ್ಯದಲ್ಲಿ ಲೋಕಾಯುಕ್ತ ಠಾಣೆಗಳ ಪುನರ್‌ ಸ್ಥಾಪನೆ
  • ಎಸಿಬಿ ಪೊಲೀಸರು ಲೋಕಾಯುಕ್ತ ವ್ಯಾಪ್ತಿಗೆ

2016ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಚಿಸಲಾಗಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿ ನ್ಯಾಯಮೂರ್ತಿಗಳಾದ ಬಿ ವೀರಪ್ಪ, ಕೆ ಎಸ್ ಹೇಮಲೇಖಾರವರಿದ್ದ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. 

ಲೋಕಾಯುಕ್ತ ಪೊಲೀಸ್ ಠಾಣೆಗಳು ಪುನರ್ ಸ್ಥಾಪನೆಯಾಗಲಿದ್ದು, ಎಸಿಬಿ ಈವರೆಗೆ ನಡೆಸಿರುವ ಎಲ್ಲ ಪ್ರಕರಣಗಳ ತನಿಖೆಯು ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿವೆ. ಅಲ್ಲದೆ, ಈವರೆಗೆ ಎಸಿಬಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಲೋಕಾಯುಕ್ತ ವ್ಯಾಪ್ತಿಗೆ ಬರುತ್ತಾರೆ. 

ಲೋಕಾಯುಕ್ತ ಸ್ಥಾನಮಾನ ರದ್ದು ಮತ್ತು ಎಸಿಬಿ ರಚನೆ ಪ್ರಶ್ನಿಸಿ ಚಿದಾನಂದ ಅರಸ್, ಬೆಂಗಳೂರು ವಕೀಲರ ಸಂಘ, ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಅರ್ಜಿ ಸೇರಿ ಒಟ್ಟು 15 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿಗಳ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.  

ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಪೌಲ್;‌ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದಾಖಲಾಗುವ ಪ್ರಕರಣ ತನಿಖೆಗೆ ಎಸಿಬಿಯನ್ನು ರಚನೆ ಮಾಡಿ 2016ರ ಮಾರ್ಚ್ 14ರಂದು ಅಂದಿನ ರಾಜ್ಯ (ಕಾಂಗ್ರೆಸ್) ಸರ್ಕಾರ ಆದೇಶ ಹೊರಡಿಸಿತ್ತು. 2016ರ ಮಾರ್ಚ್ 19ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಅಪರಾಧ ದಾಖಲು ಮತ್ತು ತನಿಖೆಗೆ ಸಂಬಂಧಿಸಿದಂತೆ ಇದ್ದ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆಯಲಾಗಿತ್ತು. ಅಂದಿನ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ 2016ರಲ್ಲಿ‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ನಿಮಗೆ ಏನು ಅನ್ನಿಸ್ತು?
1 ವೋಟ್