ಭಾರತದ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ವೆಸ್ಟ್ ಇಂಡೀಸ್

  • ಭಾರತೀಯ ತಂಡ ಮುನ್ನಡೆಸಲಿರುವ ಧವನ್
  • ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳು

ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿಯನ್ನು 3-0 ಅಂತರದಿಂದ ಸೋತು ಅವಮಾನ ಎದುರಿಸುತ್ತಿರುವ ವೆಸ್ಟ್ ಇಂಡೀಸ್ ಜುಲೈ 22ರಂದು ಭಾರತ ತಂಡವನ್ನು ಎದುರಿಸಲಿದೆ. ಜುಲೈ 22ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟವಾಗಿದೆ.

ಇದೇ ವರ್ಷದ ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ತಂಡ ಭಾರತ ಪ್ರವಾಸ ಕೈಗೊಂಡಿತ್ತು. ತಲಾ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಯ ಎಲ್ಲಾ ಪಂದ್ಯಗಳಲ್ಲಿ ವಿಂಡೀಸ್ ಸೋಲನುಭವಿಸಿತ್ತು. ಇದೀಗ ತವರಿನಲ್ಲಿ ಇದರ ಸೇಡು ತೀರಿಸಲು ಸಿದ್ಧವಾಗಿದೆ.

ಜುಲೈ 22, 24 ಮತ್ತು 27ರಂದು ಏಕದಿನ ಪಂದ್ಯಗಳು ನಡೆಯಲಿವೆ. ಮೂರೂ ಪಂದ್ಯಗಳು ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿವೆ.

ಭಾರತದ ಏಕದಿನ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಸ್‌ಪ್ರೀತ್‌ ಬುಮ್ರಾರಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ ಅವರು ನಂತರ ಟಿ20 ತಂಡವನ್ನು ಸೇರಿಕೊಳ್ಳಲಿದ್ದಾರೆ.

ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾ), ಶಮರ್ ಬ್ರೂಕ್ಸ್, ಬ್ರಾಂಡನ್ ಕಿಂಗ್, ರೋಮನ್ ಪೊವೆಲ್, ಕೀಸಿ ಕಾರ್ಟಿ, ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ಶಾಯ್ ಹೋಪ್, ಅಕೈಲ್ ಹೋಸೇನ್, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್.
ಭಾರತ: ಶಿಖರ್ ಧವನ್ (ನಾ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್.
ನಿಮಗೆ ಏನು ಅನ್ನಿಸ್ತು?
0 ವೋಟ್