ಸಂಸತ್ತಿನಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್‌ ಜೀವನಾಧಾರಿತ ರಾಕೆಟ್ರಿ ಸಿನಿಮಾ ವೀಕ್ಷಣೆ

  • ತಂತ್ರಜ್ಞಾನ ಮಾರಾಟದ ಆರೋಪ ಹೊತ್ತಿದ್ದ ವಿಜ್ಞಾನಿ
  • ಆರ್. ಮಾಧವನ್ ಅವರನ್ನು ಗೌರವಿಸಿದ ಬಿಜೆಪಿ

ಭಾರತದ ವಿಜ್ಞಾನಿ ನಂಬಿ ನಾರಾಯಣನ್ ಅವರ ಜೀವನಾಧಾರಿತ ರಾಕೆಟ್ರಿ ಸಿನಿಮಾವನ್ನು ಸಂಸದರಿಗಾಗಿ ಪ್ರದರ್ಶಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಿರಿಯ ಮುಖಂಡರು ಸಂಸದರ ಜೊತೆ ರಾಕೆಟ್ರಿ ಸಿನಿಮಾ ವೀಕ್ಷಿಸಿದ್ದಾರೆ.

ರಾಕೆಟ್ ಉಡಾವಣೆಗೆ ಬಳಸುವ ಮಹತ್ವದ ವಿಕಾಸ್ ಇಂಜಿನ್ ತಯಾರಿಸಿದ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರು ಸಹ ಈ ವಿಶೇಷ ಪ್ರದರ್ಶನದ ವೇಳೆ ಪಾಲ್ಗೊಂಡಿದ್ದರು. 

ಈ ಚಿತ್ರದ ಅಭಿನಯಕ್ಕಾಗಿ ನಾಯಕ ನಟ ಆರ್. ಮಾಧವನ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಅಭಿನಂದಿಸಿದರು.

ಚಿತ್ರದಲ್ಲಿ ನಂಬಿ ನಾರಾಯಣನ್ ಅವರು 1994ರಿಂದ 1998ರವರೆಗೆ ಎದುರಿಸಿದ ಆರೋಪ ಮತ್ತು ಕೇರಳ ಪೊಲೀಸರ ಬಗೆಗೆ ಚಿತ್ರಿಸಲಾಗಿದೆ. ನಂಬಿ ನಾರಾಯಣನ್ ಅವರು ದೇಶದ ಅತ್ಯುತ್ತಮ ಮೂರನೇ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಗ್ಗದ ಹಣದುಬ್ಬರ| ಮತ್ತೆ ಶೇ.5.4ರಷ್ಟು ರೆಪೊ ದರ ಏರಿಸಿದ ಆರ್‌ಬಿಐ

ಇಸ್ರೋ ಸಂಸ್ಥೆಯಲ್ಲಿ ವಿಜ್ಞಾನಿಯಾಗಿದ್ದ ನಂಬಿ ನಾರಾಯಣನ್ ಅವರು, ಪಾಕಿಸ್ತಾನಕ್ಕೆ ಕ್ರಯೋಜನಿಕ್ ಇಂಜಿನ್ ತಂತ್ರಜ್ಞಾನವನ್ನು ಮಾರಿದ್ದಾರೆ ಎಂಬ ಆರೋಪದ ಮೇಲೆ ಜೈಲುವಾಸ ಅನುಭವಿಸಿದ್ದರು.

ಭಾರತದಲ್ಲಿ ಇಲ್ಲದ ಟೆಕ್ನಾಲಜಿಯನ್ನು ಮಾರಲು ಹೇಗೆ ಸಾಧ್ಯವಿದೆ ಎಂದು ನಂಬಿ ನಾರಾಯಣನ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಈ ಷಡ್ಯಂತ್ರದ ಹಿಂದೆ ಯಾರೇ ಇದ್ದರು ಅವರನ್ನ ಬಿಡಬಾರದು. ಇದು ದೇಶದ ಅತಿ ದೊಡ್ಡ ಹಗರಣ. ನನ್ನ ಮೇಲೆ ಸುಳ್ಳು ಆರೋಪ ಹೊರಿಸಿದ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರು ಯಾರು ಎಂಬುದು ದೇಶಕ್ಕೆ ಗೊತ್ತಾಗಬೇಕು ಎಂದು ನಂಬಿ ನಾರಾಯಣನ್ ಹೇಳಿದ್ದರು. ರಾಕೆಟ್ರಿ ಸಿನಿಮಾ ವೀಕ್ಷಣೆ ಬಳಿಕ, ನಂಬಿ ನಾರಾಯಣನ್ ಅವರನ್ನು ಸನ್ಮಾನಿಸಲಾಯಿತು.

ನಿಮಗೆ ಏನು ಅನ್ನಿಸ್ತು?
1 ವೋಟ್
Image
av 930X180