ಕರಾವಳಿಯಲ್ಲಿ ಮುಂಗಾರು ಚುರುಕು; ರೆಡ್ ಅಲರ್ಟ್ ಘೋಷಣೆ

beech
  • ಕರಾವಳಿ ಭಾಗದಲ್ಲಿ ಮಳೆ-ಗಾಳಿ ಆರ್ಭಟ
  • ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂದಗತಿಯಲ್ಲಿ ರಾಜ್ಯ ಪ್ರವೇಶಿಸಿದ ನೈರುತ್ಯ ಮುಂಗಾರು ಚುರುಕು ಪಡೆದಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಭಾಗದ ಮೂರು ಜಿಲ್ಲೆಗಳಾದ ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿಗಳಲ್ಲಿ ಕಳೆದೆರಡು ದಿನಗಳಿಂದ ಗಣನೀಯ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಬುಧವಾರ ಮತ್ತಷ್ಟು ಮಳೆಯಾಗುವ ನಿರೀಕ್ಷೆ ಇದೆ. 

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. 

ಈ ಸುದ್ದಿ ಓದಿದ್ದೀರಾ:? ಮೀನುಗಾರರ ಸಬ್ಸಿಡಿಗೆ ಕತ್ತರಿ; ಒತ್ತಡಕ್ಕೆ ಮಣಿಯದಿರಲು ಮೀನುಗಾರರ ಆಗ್ರಹ

ರಾಜ್ಯದ ಕರಾವಳಿ ಭಾಗದಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಬೀದರ್‌ ಜಿಲ್ಲೆಯ ಜನವಾಡದಲ್ಲಿ 11 ಸೆಂ. ಮೀ , ಉಡುಪಿ- ಉತ್ತರಕನ್ನಡ ಜಿಲ್ಲೆಯಲ್ಲಿ 10 ಸೆಂ. ಮೀ., ಹೊನ್ನಾವರ, ಕೋಟಾದಲ್ಲಿ ತಲಾ 8 ಸೆಂ.ಮೀ, ಕಾರವಾರದಲ್ಲಿ 71 ಎಂ ಎಂ, ಕುಮಟಾದಲ್ಲಿ 59 ಎಂ ಎಂ ಮಳೆಯಾದ ವರದಿಯಾಗಿದೆ.

ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳಲ್ಲೂ ಅತಿ ಹೆಚ್ಚು ಮಳೆಯಾಗಿದ್ದು, ಕರಾವಳಿ ಜಂಕ್ಷನ್, ಅಂಬಲಪಾಡಿ, ಮೂಡನಿಡಂಬೂರು ಉಡುಪಿಯಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲೆಯಲ್ಲಿ ಮಳೆ ಮತ್ತು ಗಾಳಿಗೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ.

ನಿಮಗೆ ಏನು ಅನ್ನಿಸ್ತು?
1 ವೋಟ್