ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪ; 9 ವರ್ಷಗಳ ನಂತರ ಆರೋಪಿ ಬಂಧನ

  • ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಪ್ರಕರಣ
  • ಮಹಿಳೆಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆಯ ಆರೋಪ

ಒಂಬತ್ತು ವರ್ಷಗಳ ಹಿಂದೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಆತ್ಮಹತ್ಯೆಗೆ ಪ್ರಚೋದಿಸಿರುವ ಆರೋಪದಡಿ 29 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಪಲ್ಗಾರ್ ಜಿಲ್ಲೆ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆರೋಪಿ ಸುಲ್ತಾನ್ ಅಲಿಯಾಸ್ ರಾಜಾ ನೂರ್‌ ಮೊಹಮ್ಮದ್ ಶೇಖ್, 2013ರ ಫೆಬ್ರವರಿಯಲ್ಲಿ 19 ವರ್ಷದ ಮಹಿಳೆಗೆ ಮತ್ತಿನ ಔಷಧಿ ಬೆರೆಸಿದ ಪಾನೀಯವನ್ನು ನೀಡಿ ವಿವಿಧ ಸಂದರ್ಭಗಳಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ವಿರಾರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಪ್ರಮೋದ್ ಬಡಾಖ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣ; ಬಂಧನ ಭೀತಿಯಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಈ ಘಟನೆ ನಂತರ ಸಂತ್ರಸ್ತೆ ಗರ್ಭಿಣಿಯಾಗಿದ್ದಳು. ಅತ್ಯಾಚಾರ ಘಟನೆಯ ವಿಡಿಯೋ ಮಾಡಿಕೊಂಡಿದ್ದ ಆರೋಪಿಯು, ಈ ಬಗ್ಗೆ ಯಾರಿಗಾದರೂ ಹೇಳಿದರೆ ತನ್ನ ಆಕ್ಷೇಪಾರ್ಹ ವಿಡಿಯೋವನ್ನು ಪ್ರಸಾರ ಮಾಡುವುದಾಗಿ ಮಹಿಳೆಯನ್ನು ಬೆದರಿಸಿದ್ದ ಎಂದು ಅವರು ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ, ಸಂತ್ರಸ್ತೆಗೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಥಳಿಸಿ ನಿಂದಿಸಿದ್ದಾರೆ. ಈ ಘಟನೆಯಿಂದ ನೊಂದ ಮಹಿಳೆ, 2013ರ ಏಪ್ರಿಲ್ 22ರಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.

ಆರೋಪಿಯ ವಿರುದ್ಧ ಅತ್ಯಾಚಾರ, ಬೆದರಿಕೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶನಿವಾರ ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು ಎಂದು ಅವರು ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್